ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣ: ಬೆಂಗಳೂರು ಮೂಲದ ಉದ್ಯಮಿಯ ಬಂಧನ

Sampriya
ಶುಕ್ರವಾರ, 17 ಅಕ್ಟೋಬರ್ 2025 (15:16 IST)
Photo Credit X
ತಿರುವನಂತಪುರ: ನಾಡಿನ ಪ್ರಸಿದ್ಧ ಯಾತ್ರಕ್ಷೇತ್ರವಾದ ಶಬರಿಮಲೆ ದೇವಸ್ಥಾನದಲ್ಲಿ ನಡೆದ ಚಿನ್ನ ಕಳವು ಪಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಉದ್ಯಮಿಯನ್ನು ವಿಶೇಷ ತನಿಖಾ ತಂಡದ ಅಧಿಕಾರಿಗಳು ಬಂಧಿಸಿದ್ದಾರೆ.

ತನಿಖೆ ಪೂರ್ಣಗೊಳಿಸಲು ಎಸ್‌ಐಟಿಗೆ ಕೇರಳ ಹೈಕೋರ್ಟ್ ಆರು ವಾರಗಳ ಗಡುವು ನೀಡಿದೆ. ಹೀಗಾಗಿ ಪ್ರಕರಣದ ತನಿಖೆ ಚುರುಕುಗೊಂಡಿದೆ.

ಶಬರಿಮಲೆಯ ಸ್ವರ್ಣ ಲೇಪಿತ ತಾಮ್ರದ ದ್ವಾರಪಾಲಕರ ಮೂರ್ತಿಗಳಲ್ಲಿನ ಬಂಗಾರದ ತೂಕದಲ್ಲಿ ಕಡಿಮೆಯಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಉಣ್ಣಿಕೃಷ್ಣನ್‌ ಪೋಟಿಯನ್ನು ಎಸ್‌ಐಟಿ ಅಧಿಕಾರಿಗಳು ಇಂದು ಬಂಧಿಸಿದ್ದಾರೆ.

ಉದ್ಯಮಿ ಉಣ್ಣಿಕೃಷ್ಣನ್‌ ಪೋಟಿಯನ್ನು ವಶಕ್ಕೆ ಪಡೆದಿದ್ದ ಎಸ್‌ಐಟಿ, ತಿರುವನಂತಪುರದಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ವಿಚಾರಣೆಯ ಬಳಿಕ ಎಸ್‌ಐಟಿ ಅಧಿಕಾರಿಗಳು ಉಣ್ಣಿಕೃಷ್ಣನ್‌ ಪೋಟಿಯನ್ನು ಬಂಧಿಸಿದ್ದು, ವೈದ್ಯಕೀಯ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಶುಕ್ರವಾರ ಮಧ್ಯಾಹ್ನದ ವೇಳೆ ಪೋಟಿಯನ್ನು ಪತ್ತನಂತಿಟ್ಟದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಚಾರಣೆ ವೇಳೆ ಪೋಟಿಯನ್ನು ಕಸ್ಟಡಿಗೆ ಒಪ್ಪಿಸುವಂತೆ ಎಸ್‌ಐಟಿ ಕೋರಲಿದೆ.

ಕೇರಳ ಹೈಕೋರ್ಟ್ ನಿರ್ದೇಶನದ ಮೇರೆಗೆ ಎಸ್‌ಐಟಿ ಎರಡು ಪ್ರಕರಣಗಳ ತನಿಖೆ ನಡೆಸುತ್ತಿದೆ. ದ್ವಾರಪಾಲಕ ಮೂರ್ತಿಗಳಲ್ಲಿ ಚಿನ್ನ ಕಳವು ಜೊತೆಗೆ ದೇವಸ್ಥಾನದ ಗರ್ಭಗುಡಿಯ ಬಾಗಿಲಿನ ಚೌಕಟ್ಟಿನಲ್ಲಿದ್ದ ಚಿನ್ನವೂ ಕಾಣೆಯಾದ ಕುರಿತು ಎಸ್‌ಐಟಿ ತನಿಖೆ ನಡೆಸುತ್ತಿದೆ.  <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ: ವಿಸ್ಮಯ ಕಂಡು ಪುಳಕಿತರಾದ ಭಕ್ತಗಣ

ಪತ್ನಿ ಕೊಲೆಗೆ ಖತರ್ನಾಕ್ ಐಡಿಯಾ ಮಾಡಿದ್ದ ಡಾ ಮಹೇಂದ್ರ ರೆಡ್ಡಿ

ಉಪರಾಷ್ಟ್ರಪತಿ ರಾಧಾಕೃಷ್ಣನ್ ನಿವಾಸಕ್ಕೆ ಬಾಂಬ್ ಬೆದರಿಕೆ: ಸ್ಥಳಕ್ಕೆ ‌ದೌಡಾಯಿಸಿದ ಪೊಲೀಸರು

ಮುಂದಿನ ಚುನಾವಣೆಯಲ್ಲಿ ಪ್ರಿಯಾಂಕ್ ಖರ್ಗೆ ನಿಂತರೂ ಸೋಲಿಸಲು ಆರ್ ಎಸ್ಎಸ್ ಟೀಂ ರೆಡಿ

ಡಾ ಕೃತಿಕಾ ರೆಡ್ಡಿ ಕೊಲ್ಲಲು ಡಾ ಮಹೇಂದ್ರ ರೆಡ್ಡಿ ಅನಸ್ತೇಷಿಯಾ ಕದ್ದಿದ್ದು ಎಲ್ಲಿಂದ ಗೊತ್ತಾ

ಮುಂದಿನ ಸುದ್ದಿ
Show comments