Select Your Language

Notifications

webdunia
webdunia
webdunia
webdunia

ಶಬರಿಮಲೆ ದೇವಸ್ಥಾನದ ಚಿನ್ನ ಕಳವು: ಕೇರಳ ಹೈಕೋರ್ಟ್‌ನಿಂದ ಮಹತ್ವದ ಸೂಚನೆ

Shabarimale Gold Theft Case

Sampriya

ಕೊಚ್ಚಿ , ಶುಕ್ರವಾರ, 10 ಅಕ್ಟೋಬರ್ 2025 (22:17 IST)
Photo Credit X
ಕೊಚ್ಚಿ: ಶಬರಿಮಲೆ ಅಯ್ಯಪ್ಪ ದೇವಸ್ಥಾನದ ದ್ವಾರಪಾಲಕ ಮೂರ್ತಿಗಳ ಕವಚದಲ್ಲಿನ ಚಿನ್ನ ಕಳವು ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕೇರಳ ಹೈಕೋರ್ಟ್‌ ರಾಜ್ಯ ಪೊಲೀಸ್‌ ಇಲಾಖೆಗೆ ಶುಕ್ರವಾರ ಸೂಚಿಸಿದೆ. 

ನ್ಯಾಯಮೂರ್ತಿಗಳಾದ ರಾಜ ವಿಜಯರಾಘವನ್‌ ವಿ ಮತ್ತು ಕೆ.ವಿ ಜಯಕುಮಾರ್‌ ಅವರ ಪೀಠವು, ಈವರೆಗಿನ ತನಿಖೆಯಲ್ಲಿ ದ್ವಾರಪಾಲಕ ಮೂರ್ತಿಗಳ ಕವಚದ ಚಿನ್ನ ಲೇಪನ ಕಾರ್ಯದಲ್ಲಿ ಚಿನ್ನದ ದುರುಪಯೋಗ ಆಗಿರುವುದು ಕಂಡುಬಂದಿದೆ ಎಂದು ಅಭಿಪ್ರಾಯಪಟ್ಟಿದೆ.

ಈ ಪ್ರಕರಣದಲ್ಲಿ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಿ, 6 ವಾರಗಳಲ್ಲಿ ಸಮಗ್ರ ವರದಿ ಸಲ್ಲಿಸುವಂತೆ ಹಾಗೂ ಪ್ರತಿ ವಾರವೂ ತನಿಖೆಯ ಸ್ಥಿತಿಗತಿಯನ್ನು ಕೋರ್ಟ್‌ಗೆ ತಿಳಿಸುವಂತೆ ಎಸ್‌ಐಟಿ ಮುಖ್ಯಸ್ಥ ಎಡಿಜಿಪಿ ಎಚ್‌. ವೆಂಕಟೇಶ್‌ ಅವರಿಗೆ ನ್ಯಾಯಪೀಠ ಸೂಚಿಸಿತು. 




Share this Story:

Follow Webdunia kannada

ಮುಂದಿನ ಸುದ್ದಿ

ಸಮೀಕ್ಷೆಯಿಂದಾಗಿ ಮಕ್ಕಳ ಕಲಿಕೆಗೆ ಭಾರೀ ಪೆಟ್ಟು: ವಿಜಯೇಂದ್ರ ಆಕ್ರೋಶ