Webdunia - Bharat's app for daily news and videos

Install App

ದಿಗ್ವಿಜಯ್ ಸಿಂಗ್ ಮಗನ ಜತೆ ಆಟವಾಡುತ್ತಾರೋ, ಮೊಮ್ಮಗನ ಜತೆಗೋ?

Webdunia
ಬುಧವಾರ, 30 ಸೆಪ್ಟಂಬರ್ 2015 (14:05 IST)
ಸದಾ ಆಕ್ಷೇಪಾರ್ಹ ಹೇಳಿಕೆಗಳಿಂದಲೇ ಸುದ್ದಿಯಾಗುವ ಉತ್ತರ ಪ್ರದೇಶದ ಬಿಜೆಪಿ ನಾಯಕಿ ಸಾಧ್ವಿ ಪ್ರಾಚೀ ಮತ್ತೆ ಹಳೆಯ ಕಾರಣಕ್ಕೆ ಸುದ್ದಿಯಾಗಿದ್ದಾರೆ. ರಾಷ್ಟ್ರೀಯ ಸುದ್ದಿವಾಹಿನಿಯೊಂದರ ಜತೆ ಮಾತನಾಡುತ್ತಿದ್ದ ಅವರು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ದಿಗ್ವಿಜಯ್ ಸಿಂಗ್ ಅವರ ವಿರುದ್ಧ ಟೀಕಿಸಿ ಹೊಸ ವಿವಾದವನ್ನು ತಲೆಗೆಳೆದುಕೊಂಡಿದ್ದಾರೆ. 

 
"ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ರಾಜಕೀಯಕ್ಕೆ ತಕ್ಕವರಲ್ಲ. ಅವರ ತಾಯಿ ಸೋನಿಯಾ ಗಾಂಧಿಯವರಿಗೂ ಇದು ಗೊತ್ತು. ಹೀಗಾಗಿ ಚುನಾವಣೆಯ ಸಂದರ್ಭದಲ್ಲಿ ಸೋನಿಯಾರವರು ಮಗನನ್ನು ವಿದೇಶಕ್ಕೆ ಕಳುಹಿಸುತ್ತಾರೆ", ಎಂದು ಸಾಧ್ವಿ ವ್ಯಂಗ್ಯವಾಡಿದ್ದಾರೆ.
 
ಇಳಿ ವಯಸ್ಸಲ್ಲಿ ತಮ್ಮ ಮಗಳ ವಯಸ್ಸಿನ ಅಮೃತಾ ಸಿಂಗ್ ಜತೆ ಮರು ಮದುವೆಯಾಗಿರುವ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರ ವಿರುದ್ಧ ಸಹ ಗೇಲಿಗಿಳಿದ ಸಾಧ್ವಿ, "ಈಗ ಸಿಂಗ್ ತಮ್ಮ ಮಗನ ಜತೆ ಆಟವಾಡುತ್ತಾರೋ? ಅಥವಾ ಮೊಮ್ಮಗನ ಜತೆಗೋ", ಎಂದು ಪ್ರಶ್ನಿಸಿದ್ದಾರೆ.
 
ಸಾಧ್ವಿ ಈ ರೀತಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡುತ್ತಿರುವುದು ಇದೇ ಹೊಸದಲ್ಲ. ಆಗಾಗ ಇಂತಹ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿ ವಿವಾದ ಸೃಷ್ಟಿಸುವ ಮೂಲಕವೇ ಅವರು ಗುರುತಿಸಿಕೊಂಡಿದ್ದಾರೆ. ಕಳೆದ ವಾರ ಅವರು ಬಕ್ರೀದ್ ಕುರಿತು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments