Webdunia - Bharat's app for daily news and videos

Install App

ಸಮಾಜವಾದಿ ನಾಯಕನ ಮೇಲೆ ಅತ್ಯಾಚಾರ ಆರೋಪ

Webdunia
ಬುಧವಾರ, 28 ಸೆಪ್ಟಂಬರ್ 2016 (11:20 IST)
ಚುನಾವಣೆ ಹತ್ತಿರವಾಗುತ್ತಿರುವ ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಆಡಳಿತಾರೂಢ ಸಮಾಜವಾದಿ ಪಕ್ಷಕ್ಕೆ ಇರಿಸುಮುರಿಸಾಗುವಂತಹ ಘಟನೆ ನಡೆದಿದೆ. ಪಕ್ಷದ ಹಿರಿಯ ನಾಯಕ ಅಶೋಕ್ ಪ್ರಧಾನ್ ಮತ್ತಿಬ್ಬರ ಜತೆ ಸೇರಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆಯೋರ್ವಳು ದೂರಿದ್ದಾಳೆ. 

ತನ್ನ ಮಾವ ಮತ್ತು ಪಂಕಜ್ ಜಿಂದಾಲ್ ಎಂಬುವರ ಜತೆ ಸೇರಿ ಪ್ರಧಾನ್ ತನ್ನ ಮೇಲೆ ಕೀಚಕತನವನ್ನು ಮೆರೆದಿದ್ದಾರೆ ಎಂದು ಪೀಡಿತೆ ದೂರಿದ್ದಾಳೆ. 
 
ಪೀಡಿತೆಯ ಮದುವೆಯನ್ನು ಪ್ರಧಾನ್ ಮುಂದೆ ನಿಂತು ಮಾಡಿಸಿದ್ದರು ಎಂಬುದಿಲ್ಲಿ ಗಮನಾರ್ಹ ಅಂಶವಾಗಿದೆ. 
 
ಪತಿ, ಅತ್ತೆ-ಮಾವನೊಂದಿಗೆ ನೊಯ್ಡಾದಲ್ಲಿ ವಾಸವಾಗಿರುವ 24 ವರ್ಷದ ಪೀಡಿತೆ ಹೇಳುವ ಪ್ರಕಾರ ಕಳೆದ 11 ತಿಂಗಳಿಂದ ಆಕೆಯ ಮೇಲೆ ದೌರ್ಜನ್ಯವಾಗುತ್ತಿದೆ. ನನ್ನ ಪತಿ ಸದಾ ಕುಡಿದು ಹಿಂಸೆ ನೀಡುತ್ತಿದ್ದ. ನನ್ನ ಪತಿಯ ತಂದೆ ಮಾದಕ ದ್ರವ್ಯವನ್ನು ಬೆರೆಸಿದ ಪಾನೀಯ ಕುಡಿಸಿ ನನ್ನ ಮೇಲೆ ಅತ್ಯಾಚಾರವೆಸಗಿದ್ದ. ಮಾವನ ಜತೆ ಸೇರಿ ಪ್ರಧಾನ್ ಮತ್ತು ಜಿಂದಾಲ್ ಕೂಡ ಸಾಮೂಹಿಕ ಅತ್ಯಾಚಾರ ಎಸಗಿದ್ದರು ಎಂದಾಕೆ ದೂರಿನಲ್ಲಿ ತಿಳಿಸಿದ್ದಾಳೆ. 
 
ತಮ್ಮ ಮೇಲಿನ ಆರೋಪವನ್ನು ತಳ್ಳಿ ಹಾಕಿರುವ ಪ್ರಧಾನ್, ಮಹಿಳೆಯ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಹೂಡಲು ನಿರ್ಧರಿಸಿದ್ದಾರೆ.
 
ಪ್ರಧಾನ್ ಈ ಹಿಂದೆ ಭಾರತೀಯ ಜನತಾ ಪಕ್ಷದ ಜತೆ ಗುರುತಿಸಿಕೊಂಡಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈಗೀನ ಮಕ್ಕಳಿಗೆ ಬುದ್ದಿ ಹೇಳುವುದು ಕಷ್ಟ, ಮೊಬೈಲ್ ಗೀಳು ಬಿಡು ಎಂದಿದ್ದಕ್ಕೆ ಯುವತಿ ಹೀಗೇ ಮಾಡೋದಾ

ಪಾಕ್‌ಗೆ ನುಗ್ಗಿ ಹೊಡೆಯಿರಿ: ಅಮಿತ್ ಶಾ ಬಳಿ ಇದನ್ನೇ ಹೇಳಿದ್ದೇನೆ ಎಂದ ಸಚಿವ ಸಂತೋಷ್‌ ಲಾಡ್‌

ಇಂದಿರಾಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಸಿದ್ದರಾಮಯ್ಯರನ್ನು ಉಚ್ಛಾಟಿಸುವ ಧಮ್‌ ಇದ್ಯಾ: ಡಿಕೆಶಿಗೆ ಅಶೋಕ್‌ ಸವಾಲು

ಗಡಿಯಲ್ಲಿ ಮತ್ತೆ ಪಾಕ್‌ ಕಿರಿಕ್‌: ಅಪ್ರಚೋದಿತ ಗುಂಡಿನ ದಾಳಿಗೆ ತಕ್ಕ ಉತ್ತರ ನೀಡಿದ ಭಾರತೀಯ ಸೇನೆ

ಕೋಲ್ಕತ್ತಾದಲ್ಲಿ ಹೊತ್ತಿ ಉರಿದ ಹೋಟೆಲ್‌ ಕಟ್ಟಡ: 15 ಮಂದಿ ಸಜೀವ ದಹನ, ಹಲವರಿಗೆ ಗಾಯ

ಮುಂದಿನ ಸುದ್ದಿ