Publish Date: Wed, 15 Apr 2026 (17:00 IST)
Updated Date: Wed, 15 Apr 2026 (17:06 IST)
ನವದೆಹಲಿ: ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಾಮ್ರಾಟ್ ಚೌಧರಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ.
ಚೌಧರಿ ಅವರ ಶ್ರೇಷ್ಠತೆ, ಉತ್ಸಾಹ ಮತ್ತು ಅನುಭವವು ರಾಜ್ಯಕ್ಕೆ ಪ್ರಯೋಜನವನ್ನು ನೀಡುತ್ತದೆ ಮತ್ತು ಅಭಿವೃದ್ಧಿಯತ್ತ ಕೊಂಡೊಯ್ಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂಬಂಧ ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಾಮ್ರಾಟ್ ಚೌಧರಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು! ಅವರ ಶಕ್ತಿ, ಸಾರ್ವಜನಿಕ ಸೇವೆ ಮತ್ತು ತಳಮಟ್ಟದ ಅನುಭವವು ರಾಜ್ಯಕ್ಕೆ ಅತ್ಯಂತ ಅನುಕೂಲಕರವಾಗಿದೆ ಬಿಹಾರ ಸರ್ವತೋಮುಖ ಅಭಿವೃದ್ಧಿಯ ಹೊಸ ಎತ್ತರವನ್ನು ಮುಟ್ಟಲಿದೆ ಎಂದು ಮೋದಿ ಶುಭಹಾರೈಸಿದ್ದಾರೆ.
ಬಿಹಾರದ ಉಪಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ ವಿಜಯ್ ಕುಮಾರ್ ಚೌಧರಿ ಮತ್ತು ಬಿಜೇಂದ್ರ ಪ್ರಸಾದ್ ಯಾದವ್ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದರು. ಮತ್ತೊಂದು ಎಕ್ಸ್ ಪೋಸ್ಟ್‌ನಲ್ಲಿ, ಬಿಹಾರದ ಇಬ್ಬರೂ ಉಪ ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ, "ಬಿಹಾರದ ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ ವಿಜಯ್ ಕುಮಾರ್ ಚೌಧರಿ ಮತ್ತು ಬಿಜೇಂದ್ರ ಪ್ರಸಾದ್ ಯಾದವ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು! ಅವರ ನೆಲಮಟ್ಟದ ಅನುಭವ ಮತ್ತು ಸಾರ್ವಜನಿಕ ಕಲ್ಯಾಣದ ಬದ್ಧತೆಯು ಬಿಹಾರದ ಅಭಿವೃದ್ಧಿಗೆ ಹೊಸ ದಿಕ್ಕು ಮತ್ತು ವೇಗವನ್ನು ನೀಡುತ್ತದೆ ಎಂದು ನನಗೆ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದ್ದಾರೆ.