Select Your Language

Notifications

webdunia
webdunia
webdunia
webdunia

ಭಾರತೀಯ ರಿಸರ್ವ್ ಬ್ಯಾಂಕ್‌ನ 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅಧಿಕಾರ ಸ್ವೀಕಾರ

 Governor Sanjay Malhotra

Sampriya

ಮುಂಬೈ , ಬುಧವಾರ, 11 ಡಿಸೆಂಬರ್ 2024 (15:44 IST)
Photo Courtesy X
ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್‌ನ 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.

ಅವರು ಮುಂದಿನ 3 ವರ್ಷಗಳ ಕಾಲ ಗವರ್ನರ್ ಆಗಿ ಅಧಿಕಾರ ನಿರ್ವಹಿಸಲಿದ್ದಾರೆ. ಹಿಂದಿನ ಗವರ್ನರ್‌ ಶಕ್ತಿಕಾಂತ ದಾಸ್‌  ಅವರ ಅಧಿಕಾರಾವಧಿ ಡಿ.10ರಂದು (ಮಂಗಳವಾರ) ಕೊನೆಗೊಂಡಿತು.

2018ರ ಡಿ.12ರಂದು ಮಾಜಿ ಗವರ್ನರ್‌ ಊರ್ಜಿತ್ ಪಟೇಲ್ ಅವರ ಹಠಾತ್ ನಿರ್ಗಮನದ ನಂತರ, 25ನೇ ಗವರ್ನರ್ ಆಗಿ ಶಕ್ತಿಕಾಂತ ದಾಸ್‌ ನೇಮಕಗೊಂಡಿದ್ದರು. ಮೂರು ವರ್ಷ ಅಧಿಕಾರ ಪೂರ್ಣಗೊಳಿಸಿದ ಬಳಿಕ 2ನೇ ಅವಧಿಗೂ ಅವರನ್ನೇ ಮುಂದುವರಿಸಲಾಗಿತ್ತು.
 

ಸಂಜಯ್‌ ಮಲ್ಹೋತ್ರಾ ಅವರು 1990ರ ಬ್ಯಾಚ್‌ನ ರಾಜಸ್ಥಾನ ಕೇಡರ್‌ನ ಐಎಎಸ್‌ ಅಧಿಕಾರಿಯಾಗಿದ್ದಾರೆ. ಅವರು ಈ ಹಿಂದೆ ಸರ್ಕಾರಿ ಸ್ವಾಮ್ಯದ ಆರ್‌ಇಸಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಅಲ್ಲದೇ ತೆರಿಗೆ ಸಂಗ್ರಹ ಇತ್ತೀಚಿನ ದಿನಗಳಲ್ಲಿ ಭಾರೀ ಏರಿಕೆ ಕಾಣುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

ಬಜೆಟ್‌ ವಿಚಾರದಲ್ಲಿ ತೆರಿಗೆ ಸಂಬಂಧಿತ ಪ್ರಸ್ತಾವನೆಗಳನ್ನು ಅವರು ಪರಿಶೀಲಿಸುತ್ತಿದ್ದರು. ಜಿಎಸ್‌ಟಿ ಕೌನ್ಸಿಲ್‌ನ ಪದನಿಮಿತ್ತ ಕಾರ್ಯದರ್ಶಿಯಾಗಿ ಹಾಗೂ ಸರಕು ಮತ್ತು ಸೇವಾ ತೆರಿಗೆಯಲ್ಲಿ ರಾಜ್ಯಗಳ ನಿರೀಕ್ಷೆಗಳ ವಿಚಾರಗಳಂಥ ಕ್ಲಿಷ್ಟ ಸಂದರ್ಭಗಳನ್ನು ಜಾಣ್ಮೆಯಿಂದ ನಿಭಾಯಿಸಿದ್ದರು.

ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಕಂಪ್ಯೂಟರ್ ಸೈನ್ಸ್ ಪದವಿ ಪಡೆದಿರುವ ಮಲ್ಹೋತ್ರಾ ಅವರು ಯುಎಸ್‌ನ ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದಿಂದ ಸಾರ್ವಜನಿಕ ನೀತಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಧನ್‌ಕರ್‌ ವಿರುದ್ಧ ಅವಿಶ್ವಾಸ ನಿರ್ಣಯ, ರಾಜ್ಯಸಭೆಯಲ್ಲಿ ವಿಪಕ್ಷಗಳ ಕೋಲಾಹಲ; ಕಲಾಪ ಮುಂದೂಡಿಕೆ