Publish Date: Mon, 18 Jun 2018 (14:32 IST)
Updated Date: Mon, 18 Jun 2018 (14:35 IST)
ನವದೆಹಲಿ : ಆರೋಗ್ಯ ಸ್ಥಿತಿಯಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಕುಮಾರ್ ಜೈನ್ ಅವರ ಆರೋಗ್ಯ ಸ್ಥಿತಿ ಇದೀಗ ಸ್ಥಿರವಾಗಿದೆ ಎಂಬುದಾಗಿ ತಿಳಿದುಬಂದಿದೆ.
ಏಳು ದಿನಗಳಿಂದ ಮುಷ್ಕರದಲ್ಲಿ ತೊಡಗಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಕುಮಾರ್ ಜೈನ್ ಅವರ ಆರೋಗ್ಯ ಭಾನುವಾರ ಮಧ್ಯರಾತ್ರಿಯ ಸಮಯಕ್ಕೆ ಹದಗೆಟ್ಟಿದ್ದರಿಂದ ಅವರನ್ನು ದೆಹಲಿಯ ಲೋಕ ನಾಯಕ ಜಯ ಪ್ರಕಾಶ್ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು ಅವರ ರಕ್ತದೊತ್ತಡ ಸಹಜವಾಗಿದೆ. ಉಸಿರಾಟದ ಸಮಸ್ಯೆಯಿದ್ದು ಈಗ ಆರೋಗ್ಯ ಸ್ಥಿರವಾಗಿದೆ ಎಂದು ಎಲ್ ಎನ್ ಜೆಪಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ