ನವದೆಹಲಿ: ಸೋಷಿಯಲ್ ಮೀಡಿಯಾದಲ್ಲಿ ಕೊರೋನಾ ಕುರಿತ ಸಂದೇಶಗಳಿಗೆ ಕಡಿವಾಣ ಹಾಕುವುದು, ಬಲವಂತವಾಗಿ ಅಳಿಸುವುದು ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ.
ನ್ಯಾಯಮೂರ್ತಿ ಚಂದ್ರಚೂಡ ಈ ಆದೇಶ ನೀಡಿದ್ದಾರೆ. ಒಂದು ವೇಳೆ ಜನರು ತಮ್ಮಲ್ಲಿರುವ ಆತಂಕವನ್ನು ಸೋಷಿಯಲ್ ಮೀಡಿಯಾ ಮೂಲಕ ಹೊರಹಾಕುತ್ತಿದ್ದರೆ ಅದಕ್ಕೆ ಕಡಿವಾಣ ಹಾಕಬಾರದು. ಜನರು ಆಸ್ಪತ್ರೆಗಳಲ್ಲಿನ ಬೆಡ್ ಅವ್ಯವಸ್ಥೆ, ಆಕ್ಸಿಜನ್ ಕೊರತೆ ಇತ್ಯಾದಿ ವಿಚಾರಗಳ ಬಗ್ಗೆ ತಮ್ಮ ಆತಂಕ ಹೊರಹಾಕಲು ಅವಕಾಶ ನೀಡಬೇಕು. ಒಂದು ವೇಳೆ ಅದಕ್ಕೆ ಕಡಿವಾಣ ಹಾಕಿದರೆ ಅದನ್ನು ನಾವು ನ್ಯಾಯಾಲಯದ ಆದೇಶದ ಉಲ್ಲಂಘನೆ ಎಂದು ನಿರ್ಧರಿಸಬೇಕಾಗುತ್ತದೆ ಎಂದು ಖಡಕ್ ಆದೇಶ ನೀಡಿದ್ದಾರೆ.