Webdunia - Bharat's app for daily news and videos

Install App

ಆಧಾರ ವಿರುದ್ಧದ ಅರ್ಜಿಗಳ ವಿಚಾರಣೆಗೆ ಪ್ರತ್ಯೇಕ ಪೀಠ: ಸುಪ್ರೀಂಕೋರ್ಟ್

Webdunia
ಸೋಮವಾರ, 30 ಅಕ್ಟೋಬರ್ 2017 (19:02 IST)
ವಿವಿಧ ಸೇವೆಗಳನ್ನು ಮತ್ತು ಸರ್ಕಾರಿ ಕಲ್ಯಾಣ ಯೋಜನೆಗಳನ್ನು ಪಡೆಯುವ ಸಲುವಾಗಿ ಆಧಾರ್ ಕಡ್ಡಾಯವಾಗೊಳಿಸಿರುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ, ಸಲ್ಲಿಸಿದ ಅರ್ಜಿಗಳ ವಿಚಾರಣೆಗಾಗಿ ಪ್ರತ್ಯೇಕ ಸಂವಿಧಾನ ಪೀಠವನ್ನು ರಚಿಸಲಾಗುವುದು ಎಂದು ಸುಪ್ರೀಂಕೋರ್ಟ್ ಹೇಳಿದೆ. 
ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ, ನ್ಯಾಯಮೂರ್ತಿ ಎ.ಕೆ.ಖಾನ್ವಿಲ್ಕರ್ ಮತ್ತು ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ, ನವೆಂಬರ್ ಕೊನೆಯ ವಾರದಲ್ಲಿ ಪ್ರತ್ಯೇಕ ಪೀಠದಲ್ಲಿ ಆಧಾರ ಕಡ್ಡಾಯ ವಿರುದ್ಧದ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದ್ಜಾರೆ.  
 
ಇದಕ್ಕಿಂತ ಮೊದಲು,  ವಿವಿಧ ಸಮಾಜ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ಪಡೆಯುವುದಕ್ಕಾಗಿ ಆಧಾರ್ ಕಡ್ಡಾಯ ಮಾಡಿರುವ ಕೇಂದ್ರ ಸರಕಾರದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರಕಾರ ಅರ್ಜಿ ಸಲ್ಲಿಸಿ ಪ್ರಶ್ನಿಸಿರುವ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್, ಸಂಸತ್ತಿನ ಬಹುಮತದ ನಿರ್ಣಯವನ್ನು ರಾಜ್ಯ ಸರಕಾರ ಹೇಗೆ ಪ್ರಶ್ನಿಸಲು ಸಾಧ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದೆ. 
 
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಧಾರ ಕಡ್ಡಾಯಗೊಳಿಸಿರುವುದಕ್ಕೆ ವಿರೋಧವಾಗಿದ್ದಲ್ಲಿ ವೈಯಕ್ತಿಕವಾಗಿ ಕೋರ್ಟ್‌‍ಗೆ ಅರ್ಜಿ ಸಲ್ಲಿಸಲಿ ಎಂದು ಸುಪ್ರೀಂಕೋರ್ಟ್ ಸಲಹೆ ನೀಡಿದೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ಮುಂದಿನ ಸುದ್ದಿ
Show comments