Select Your Language

Notifications

webdunia
webdunia
webdunia
webdunia

ಗುಜರಾತ್ ಚುನಾವಣೆಗೆ ಎರಡನೇ ಹಂತದ ಮತದಾನ ನಾಳೆ

ಗುಜರಾತ್ ಚುನಾವಣೆ
ಗುಜರಾತ್ ವಿಧಾನಸಭೆಯ 93 ಸ್ಥಾನಗಳಿಗೆ ಎರಡನೇ ಹಂತದಲ್ಲಿ ನಡೆಯಲಿರುವ ಚುನಾವಣೆಯ ಬಹಿರಂಗ ಪ್ರಚಾರವು ಮಂಗಳವಾರ ಕೊನೆಗೊಂಡಿದೆ. ನಾಳೆ ಮತದಾನ ನಡೆಯಲಿದೆ.

ಒಟ್ಟು 851 ಅಭ್ಯರ್ಥಿಗಳು ಕಣದಲ್ಲಿದ್ದು, 2.22 ಕೋಟಿ ಮತದಾರರಿದ್ದಾರೆ. ಡಿಸೆಂಬರ್ 9ರಂದು ಮೊದಲ ಹಂತದ ಮತದಾನದಲ್ಲಿ 4 ವಿಧಾನಸಭಾ ಕ್ಷೇತ್ರಗಳ 6 ಮತಗಟ್ಟೆಗಳಲ್ಲಿನ ಇವಿಎಂಗಳಲ್ಲಿ ಸಂಗ್ರಹವಾಗಿದ್ದ ಫಲಿತಾಂಶವನ್ನು ರದ್ದುಗೊಳಿಸಲಾಗಿದೆ. ಆದ್ದರಿಂದ ಈ ನಾಲ್ಕು ಕ್ಷೇತ್ರಗಳಿಗೆ ನಾಳೆಯೇ ಮತದಾನ ನಡೆಯಲಿದೆ.

ಡಿಸೆಂಬರ್ 9ರಂದು 89 ಕ್ಷೇತ್ರಗಳಿಗೆ ನಡೆದ ಮೊದಲ ಹಂತದ ಮತದಾನದಲ್ಲಿ ಶೇ 68ರಷ್ಟು ಮತದಾನ ನಡೆದಿತ್ತು. ಡಿ.18ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನ ರಾಹುಲ್ ಗಾಂಧಿ ಭರ್ಜರಿ ಪ್ರಚಾರ ನಡೆಸಿ ಮತದಾರರನ್ನು ಒಲಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ,

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ರವಿ ಬೆಳಗೆರೆಗೆ ತೀವ್ರ ಅನಾರೋಗ್ಯ