Publish Date: Sat, 18 Mar 2023 (12:14 IST)
Updated Date: Sat, 18 Mar 2023 (11:53 IST)
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರು ಹಾಗೂ ಭದ್ರತಾ ಪಡೆಯ ನಡುವೆ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾದ ಮಿಟ್ರಿಗಾಮ್ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಗುಪ್ತಚರ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು ಎಂದಿದ್ದಾರೆ. ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದು, ಸೈನಿಕರು ಪ್ರತಿದಾಳಿ ನಡೆಸಿದ್ದಾರೆ.