ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬಂಧಿಸಿದವರಿಗೆ ಕಾನೂನು ನೆರವು ನೀಡಲಾಗುವುದು ಎಂದು ಘೋಷಿಸಿದ್ದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರುದ್ಧ ದೇಶದ್ರೋಹ ಕೇಸ್ ದಾಖಲಾಗಿದೆ.
ಖಾಸಗಿ ದೂರಿನ ಹಿನ್ನೆಲೆಯಲ್ಲಿ ನ್ಯಾಯಾಲಯ ಸರೂರ್ ನಗರ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಓವೈಸಿ ವಿರುದ್ಧ ದೂರು ದಾಖಲಿಸುವಂತೆ ನಿರ್ದೇಶನ ನೀಡಿದೆ. ಅದರಂತೆ ಓವೈಸಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಫಸೀರ್ ಇಕ್ಬಾಲ್ ತಿಳಿಸಿದ್ದಾರೆ.
ವೃತ್ತಿಯಲ್ಲಿ ವಕೀಲರಾಗಿರುವ ಕೆ.ಕರುಣಾಸಾಗರ್ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿ ಅಸಾದುದ್ದೀನ್ ಓವೈಸಿ ವಿರುದ್ಧ ದೂರು ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶ ನೀಡುವಂತೆ ಕೋರಿದ್ದರು.
ನ್ಯಾಯಾಲಯದ ಆದೇಶದಂತೆ ತನಿಖೆ ನಡೆಸಿ ವರದಿಯನ್ನು ಸಲ್ಲಿಸುತ್ತೇವೆ ಎಂದು ಇಕ್ಬಾಲ್ ತಿಳಿಸಿದ್ದಾರೆ.
ಅಸಾದುದ್ದೀನ್ ಓವೈಸಿ ಹೇಳಿಕೆ ದೇಶವಿರೋಧಿಗಳಿಗೆ ಮತ್ತು ಭಯೋತ್ಪಾದಕರಿಗೆ ಬೆಂಬಲ ಸೂಚಿಸಿದಂತಾಗಿದ್ದು, ಓವೈಸಿ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಐಸಿಎಸ್ ಉಗ್ರರಿಗೆ ನೆರವಾಗುತ್ತಿದ್ದಾರೆ. ಇದೊಂದು ದೇಶದ್ರೋಹಿ ಕೃತ್ಯ ಎಂದು ಸಾಗರ್ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.
ಎನ್‌ಐಎ ಬಂಧಿತ ಆರೋಪಿಗಳು ಪೊಲೀಸ್ ಠಾಣೆಗಳು, ಧಾರ್ಮಿಕ ಸ್ಥಳಗಳು, ಖ್ಯಾತನಾಮ ವ್ಯಕ್ತಿಗಳ ಮೇಲೆ ದಾಳಿ ನಡೆಸುವ ಸಂಚು ರೂಪಿಸಿರುವುದನ್ನು ಒಪ್ಪಿಕೊಂಡಿರುವುದು ಆಘಾತಕಾರಿ ಸಂಗತಿ ಎಂದು ವಕೀಲ ಕರಉಮಾ ಸಾಗರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.