Select Your Language

Notifications

webdunia
webdunia
webdunia
webdunia

ಏರ್ ಇಂಡಿಯಾವನ್ನು ಟಾಟಾ ಸನ್ಸ್‌ಗೆ ಮಾರಾಟ

ಏರ್ ಇಂಡಿಯಾ
ನವದೆಹಲಿ : ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯನ್ನು ಟಾಟಾ ಸನ್ಸ್ಗೆ ಅಧಿಕೃತವಾಗಿ ಹಸ್ತಾಂತರಿಸಲಾಗಿದೆ.
 
ಏರ್ ಇಂಡಿಯಾ ಅಧಿಕೃತ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟಾಟಾ ಸನ್ಸ್ ಅಧ್ಯಕ್ಷ ಎನ್.ಚಂದ್ರಶೇಖರನ್ ಭೇಟಿಯಾಗಿದ್ದರು. ಟಾಟಾ ಗ್ರೂಪ್, ಏರ್ ಇಂಡಿಯಾವನ್ನು ಮರಳಿ ಪಡೆದಿದ್ದಕ್ಕೆ ಸಂತೋಷವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಳೆದ ವರ್ಷ ಅಕ್ಟೋಬರ್ನಲ್ಲಿ ಸರ್ಕಾರವು 18,000 ಕೋಟಿಗೆ ಏರ್ ಇಂಡಿಯಾವನ್ನು ಟಾಟಾ ಗ್ರೂಪ್ಸ್ಗೆ ಮಾರಾಟ ಮಾಡಿತ್ತು. ಅದಾದ ನಂತರ ವಿಮಾನಯಾನ ಸಂಸ್ಥೆಯಲ್ಲಿನ ತನ್ನ ಶೇ.100 ಪಾಲನ್ನು ಮಾರಾಟ ಮಾಡಲು ಸರ್ಕಾರದ ಇಚ್ಛೆಯನ್ನು ದೃಢೀಕರಿಸಲು ಟಾಟಾ ಗ್ರೂಪ್ಸ್ಗೆ ಲೆಟರ್ ಆಫ್ ಇಂಟೆಂಟ್ (ಎನ್ಒಐ) ನೀಡಲಾಯಿತು.

ನಂತರ ಕೇಂದ್ರವು ಷೇರು ಖರೀದಿ ಒಪ್ಪಂದಕ್ಕೆ ಸಹಿ ಹಾಕಿತ್ತು. ಸಾಲದ ಸುಳಿಯಲ್ಲಿದ್ದ ಏರ್ ಇಂಡಿಯಾವನ್ನು ಕೇಂದ್ರ ಸರ್ಕಾರವು ಟಾಟಾ ಸನ್ಸ್ಗೆ ಮಾರಾಟ ಮಾಡಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಹಿಜಬ್ ಕೇಸರಿ ಶಾಲು ವಿವಾದ