Select Your Language

Notifications

webdunia
webdunia
webdunia
webdunia

ಸಿಪಿಎಂ ಹಿರಿಯ ನಾಯಕ ಸೀತಾರಾಂ ಯೆಚೂರಿ ಆರೋಗ್ಯ ಗಂಭೀರ

ಸಿಪಿಎಂ ಹಿರಿಯ ನಾಯಕ ಸೀತಾರಾಂ ಯೆಚೂರಿ ಆರೋಗ್ಯ ಗಂಭೀರ

Sampriya

ನವದೆಹಲಿ , ಮಂಗಳವಾರ, 10 ಸೆಪ್ಟಂಬರ್ 2024 (14:10 IST)
Photo Courtesy X
ನವದೆಹಲಿ: ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

ತೀವ್ರ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ 72 ವರ್ಷದ ಯಚೂರಿ ಅವರನ್ನು ದೆಹಲಿಯ ಏಮ್ಸ್‌ನಲ್ಲಿ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಿದೆ.

ವೈದ್ಯರ ತಂಡವು ಯಚೂರಿ ಅವರ ಆರೋಗ್ಯದ ಬಗ್ಗೆ ನಿಗಾ ವಹಿಸಿದೆ. ನ್ಯುಮೋನಿಯಾ ತರಹದ ಎದೆ ಸೋಂಕಿನ ಚಿಕಿತ್ಸೆಗಾಗಿ ಯಚೂರಿ ಅವರನ್ನು ಆಗಸ್ಟ್ 19ರಂದು ಏಮ್ಸ್‌ಗೆ ದಾಖಲಿಸಲಾಗಿತ್ತು.

ಸೀತಾರಾಂ ಯೆಚೂರಿ ಅವರ ಕಾಯಿಲೆಯ ಸ್ವರೂಪವನ್ನು ಆಸ್ಪತ್ರೆ ಬಹಿರಂಗಪಡಿಸಿಲ್ಲ. ಯೆಚೂರಿ ಇತ್ತೀಚೆಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ (ಜೆಎನ್‌ಯು) ವಿದ್ಯಾರ್ಥಿಯಾಗಿದ್ದಾಗ ತುರ್ತು ಪರಿಸ್ಥಿತಿಯ ಸಮಯದಲ್ಲಿ ಅವರನ್ನು ಬಂಧಿಸಲಾಗಿತ್ತು. 1977 ಮತ್ತು 1988 ರ ನಡುವೆ ಮೂರು ಬಾರಿ ಜೆಎನ್‌ಯು ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

2004 ರಲ್ಲಿ ಯುಪಿಎ ಸರ್ಕಾರವನ್ನು ರಚಿಸುವಲ್ಲಿ ಸೀತಾರಾಂ ಯೆಚೂರಿ ಮಹತ್ವದ ಪಾತ್ರವನ್ನು ವಹಿಸಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ವಾಲ್ಮೀಕಿ ನಿಗಮದಲ್ಲಿ ಮಾಜಿ ಸಚಿವ ನಾಗೇಂದ್ರ ಪಾತ್ರದ ಬಗ್ಗೆ ಇಡಿ ಮಹತ್ವದ ಹೇಳಿಕೆ