Webdunia - Bharat's app for daily news and videos

Install App

ಇದನ್ನೋದಿದರೆ ನೀವು ಶಾಕ್‌ಗೊಳಗಾಗುವುದು ಖಂಡಿತ

Webdunia
ಸೋಮವಾರ, 27 ಫೆಬ್ರವರಿ 2017 (16:05 IST)
ಮಕ್ಕಳನ್ನು ಹೆತ್ತಿರುವ, ಪೋಷಿಸುತ್ತಿರುವ ಪೋಷಕರು ಎಚ್ಚೆತ್ತುಕೊಳ್ಳಲೇ ಬೇಕಾದ ಸಮಯವಿದು. ದೇಶದಲ್ಲಿ ಬಾಲಾಪರಾಧಗಳು ಮೀತಿಮೀರಿದ್ದು ಕೊಲೆ, ಲೈಂಗಿಕ ದೌರ್ಜನ್ಯ, ಅತ್ಯಾಚಾರದಂತಹ ಪ್ರಕರಣಗಳು ಪದೇ ಪದೇ ಬೆಳಕಿಗೆ ಬರುತ್ತಿವೆ. ಇತ್ತೀಚಿಗೆ ದೆಹಲಿಯಲ್ಲಿ ನಡೆದ ಪ್ರಕರಣವೊಂದು ದೇಶವನ್ನೇ ಬೆಚ್ಚಿ ಬೀಳಿಸಿದೆ. 7 ವರ್ಷದ ಪುಟ್ಟ ಮಗುವಿನ ಮೇಲೆ ಆಕೆಯ ಸೀನಿಯರ್ಸ್ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಆರೋಪಿಗಳು ಹುಡುಗರು ಎಂದು ನೀವಂದುಕೊಂಡರೆ ಅದು ತಪ್ಪು. ಈ ಪ್ರಕರಣದ ಆರೋಪಿಗಳು ಮತ್ತು ಪೀಡಿತೆ ಇಬ್ಬರು ಬಾಲಕಿಯರೇ.
 
ರಾಷ್ಟ್ರೀಯ ಸುದ್ದಿವಾಹಿನಿಯೊಂದರಲ್ಲಿ ಪ್ರಕಟವಾಗಿರುವ ಸುದ್ದಿಯ ಪ್ರಕಾರ, ಮೋತಿನಗರ ಪ್ರದೇಶದ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಎರಡನೆಯ ತರಗತಿಯ ಬಾಲಕಿಯ ಮೇಲೆ ಅದೇ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ವಿದ್ಯಾರ್ಥಿನಿಯರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ. 
 
ತನ್ನ ಸೀನಿಯರ್ಸ್‌ಗಳಿಂದಾಗುತ್ತಿರುವ ಶೋಷಣೆ ಬಗ್ಗೆ ಬಾಲಕಿ ತನ್ನ ಪೋಷಕರಿಗೆ ವಿವರಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ, ಮತ್ತೀಗ ಆಕೆಯ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು  ಆರೋಪಿಗಳ ವಿರುದ್ಧ ಐಪಿಸಿ ವಿಭಾಗ 328, 34 ಮತ್ತು ಪೋಸ್ಕೋ ಕಾಯಿದೆಯಡಿಯಲ್ಲಿ ದೂರು ದಾಖಲಾಗಿದೆ.
 
ಆರೋಪಿಗಳಿಬ್ಬರನ್ನು ಬಂಧಿಸಲಾಗಿದ್ದು, ಅದರಲ್ಲಿ ಒಬ್ಬಳು 19 ವರ್ಷ ವಯಸ್ಸಿನವಳಾಗಿದ್ದಾಳೆ. ಅನೇಕ ಬಾರಿ ಅನುತ್ತೀರ್ಣಳಾಗಿದ್ದರಿಂದ ಆಕೆ ಇನ್ನು 9ನೇ ತರಗತಿಯಲ್ಲಿ ಓದುತ್ತಿದ್ದಾಳೆ ಎಂದು ತಿಳಿದು ಬಂದಿದೆ.
 
ಊಟದ ವಿರಾಮ ಮತ್ತು ಶಾಲೆ ಬಿಟ್ಟ ನಂತರ ಆಕೆಯನ್ನು ಖಾಲಿ ಇದ್ದ ಕೋಣೆಗಳಿಗೆ ಕೊಂಡೊಯ್ಯುತ್ತಿದ್ದ ಹುಡುಗಿಯರು ಆಕೆಯ ಬಟ್ಟೆ ಬಿಚ್ಚಿಸುತ್ತಿದ್ದರು ಮತ್ತು ಅಸಭ್ಯವಾಗಿ ವರ್ತಿಸುತ್ತಿದ್ದರು. ಅದಕ್ಕಾಕೆ ವಿರೋಧ ವ್ಯಕ್ತ ಪಡಿಸಿದಾಗ ಬೆದರಿಕೆ ಒಡ್ಡುತ್ತಿದ್ದರು ಎಂದು ತಿಳಿದು ಬಂದಿದೆ. 
 
ಬಾಲಕಿಯನ್ನೀಗ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು, ಆಪ್ತ ಸಮಾಲೋಚನೆ ನಡೆಸಿ ಆಕೆಯಲ್ಲಿ ಹುಟ್ಟಿರುವ ಭಯವನ್ನು ಹೋಗಲಾಡಿಸುವ ಪ್ರಯತ್ನವನ್ನು ನಡೆಸಲಾಗುತ್ತಿದೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ