Publish Date: Thu, 28 Apr 2022 (08:20 IST)
Updated Date: Thu, 28 Apr 2022 (08:34 IST)
ಗಾಂಧಿನಗರ: 9 ನೇ ತರಗತಿ ವಿದ್ಯಾರ್ಥಿನಿಗೆ ಹಿರಿಯ ವಿದ್ಯಾರ್ಥಿಗಳು ಬಲವಂತವಾಗಿ ಮೂತ್ರ ಕುಡಿಸಿ ರಾಗಿಂಗ್ ಮಾಡಿದ ಘಟನೆ ನಡೆದಿದೆ.
ಈ ಬಗ್ಗೆ ವಿದ್ಯಾರ್ಥಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಶಾಲೆ ಪ್ರಾಂಶುಪಾಲರು ಕಾಟಾಚಾರಕ್ಕೆ ವಿಚಾರಣೆ ನಡೆಸಿದ್ದರು.
ಹೀಗಾಗಿ ಪೋಷಕರು ಪೊಲೀಸ್ ಠಾಣೆ ಕದ ತಟ್ಟಿದ್ದು, ದೂರು ನೀಡಿದ್ದಾರೆ. ಆದರೆ ಈವರೆಗೆ ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಾಗಿಲ್ಲ ಎನ್ನಲಾಗಿದೆ.