Select Your Language

Notifications

webdunia
webdunia
webdunia
webdunia

ಸೆನ್ಸೆಕ್ಸ್: 25 ಸಾವಿರ ಗಡಿದ ಶೇರುಪೇಟೆ ಸಂವೇದಿ ಸೂಚ್ಯಂಕ

ಸೆನ್ಸೆಕ್ಸ್: 25 ಸಾವಿರ ಗಡಿದ ಶೇರುಪೇಟೆ ಸಂವೇದಿ ಸೂಚ್ಯಂಕ
ಮುಂಬೈ , ಸೋಮವಾರ, 1 ಫೆಬ್ರವರಿ 2016 (15:13 IST)
ಏಷ್ಯಾ ಮಾರುಕಟ್ಟೆಗಳ ಮಿಶ್ರ ವಹಿವಾಟಿನ ಮಧ್ಯೆಯೂ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 131 ಪಾಯಿಂಟ್‌ಗಳ ಏರಿಕೆ ಕಂಡು 25000 ಅಂಕಗಳ ಗಡಿ ದಾಟಿದೆ. 
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 401.12 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 131.63 ಪಾಯಿಂಟ್‌ಗಳ ಏರಿಕೆ ಕಂಡು 25,002.32 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 28.80 ಪಾಯಿಂಟ್‌ಗಳ ಏರಿಕೆ ಕಂಡು 7,592.35 ಅಂಕಗಳಿಗೆ ತಲುಪಿದೆ.
 
ಏಷ್ಯಾ ಮಾರುಕಟ್ಟೆಗಳ ಮಿಶ್ರ ವಹಿವಾಟಿನ ಮಧ್ಯೆಯೂ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಶೇರುಪೇಟೆಯ ಸೂಚ್ಯಂಕ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ಹೀರೋ ಮೋಟಾರ್ ಕಾರ್ಪೋರೇಶನ್ ಮತ್ತು ಮಾರುತಿ ಸುಜುಕಿ ಶೇರುಗಳ ವಹಿವಾಟಿನಲ್ಲಿ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.1.80 ರಷ್ಟು ಏರಿಕೆ ಕಂಡಿದೆ. ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಕೂಡಾ ಶೇ.0.61 ರಷ್ಟು ಇಳಿಕೆ ಕಂಡಿದೆ.
 
ಶಾಂಘೈ ಶೇರುಪೇಟೆ ಶೇ.1.71 ರಷ್ಟು ಕುಸಿತವಾಗಿದ್ದರೆ, ಅಮೆರಿಕದ ಡೊ ಜೋನ್ಸ್ ಶೇ.2.47 ರಷ್ಟು ಇಳಿಕೆಯಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ. 

Share this Story:

Follow Webdunia kannada