Select Your Language

Notifications

webdunia
webdunia
webdunia
webdunia

ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳದಿಂದ ಸೂಚ್ಯಂಕ ಏರಿಕೆ

ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳದಿಂದ ಸೂಚ್ಯಂಕ ಏರಿಕೆ
ಮುಂಬೈ , ಮಂಗಳವಾರ, 22 ಜುಲೈ 2014 (13:20 IST)
ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಸತತ ಆರನೇ ದಿನವೂ 119 ಪಾಯಿಂಟ್‌ಗಳ ಭರ್ಜರಿ ಚೇತರಿಕೆ ಕಂಡಿದೆ.
 
ಏಷ್ಯಾ ಮಾರುಕಟ್ಟೆಗಳ ಭರ್ಜರಿ ವಹಿವಾಟು, ಕಾರ್ಪೋರೇಟ್ ಕಂಪೆನಿಗಳ ತ್ರೈಮಾಸಿಕ ಫಲಿತಾಶ ಚೇತರಿಕೆ ಹಾಗೂ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳದಿಂದಾಗಿ ಶೇರುಪೇಟೆ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.  
 
ಕಳೆದ ಐದು ದಿನಗಳ ವಹಿವಾಟಿನಲ್ಲಿ 708 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 119.33 ಪಾಯಿಂಟ್‌ಗಳ ಏರಿಕೆ ಕಂಡು 25,834.50 ಅಂಕಗಳಿಗೆ ತಲುಪಿದೆ. 
 
ಮೂಲಸೌಕರ್ಯ, ರಿಯಲ್ಟಿ, ಎಫ್‌ಎಂಸಿಜಿ, ತೈಲ ಮತ್ತು ಅನಿಲ ಕ್ಷೇತ್ರದ ಶೇರುಗಳ ಖರೀದಿಗೆ ಹೂಡಿಕೆದಾರರು ಆಸಕ್ತಿ ತೋರಿದ್ದರಿಂದ ಸೂಚ್ಯಂಕ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ. 
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 23.35 ಪಾಯಿಂಟ್‌ಗಳ ಏರಿಕೆ ಕಂಡು 7707.55 ಅಂಕಗಳಿಗೆ ತಲುಪಿದೆ.
 
ಜಪಾನ್‌ನ ನಿಕೈ ಮಾರುಕಟ್ಟೆ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.96 ರಷ್ಟು ಏರಿಕೆ ಕಂಡಿದೆ. ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಶೇ.0.34 ರಷ್ಟು ಏರಿಕೆ ಕಂಡಿದೆ.
 
 

Share this Story:

Follow Webdunia kannada