Select Your Language

Notifications

webdunia
webdunia
webdunia
webdunia

ಕಾರ್ಪೋರೇಟ್ ಕಂಪೆನಿಗಳ ಫಲಿತಾಂಶದಿಂದ ಚೇತರಿಕೆ ಕಂಡ ಸೂಚ್ಯಂಕ

ಕಾರ್ಪೋರೇಟ್ ಕಂಪೆನಿಗಳ ಫಲಿತಾಂಶದಿಂದ ಚೇತರಿಕೆ ಕಂಡ ಸೂಚ್ಯಂಕ
ಮುಂಬೈ , ಸೋಮವಾರ, 21 ಜುಲೈ 2014 (13:24 IST)
ತ್ರೈಮಾಸಿಕ ಫಲಿತಾಂಶದಲ್ಲಿ ಭಾರಿ ಚೇತರಿಕೆ ಕಂಡು ಬಂದಿದ್ದರಿಂದ ಉತ್ತೇಜಿತರಾದ ಹೂಡಿಕೆದಾರರು ಶೇರುಗಳ ಖರೀದಿಗೆ ಮುಂದಾಗಿದ್ದರಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 174 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ನೇರ ವಿದೇಶಿ ಬಂಡವಾಳದ ಒಳಹರಿವು ಮತ್ತು ಚಿಲ್ಲರೆ ಹೂಡಿಕೆದಾರರು ಶೇರುಗಳ ಖರೀದಿಗೆ ಆಸಕ್ತಿ ತೋರಿದ್ದರಿಂದ ಸೂಚ್ಯಂಕ ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ಕಳೆದ ನಾಲ್ಕು ದಿನಗಳ ವಹಿವಾಟಿನಲ್ಲಿ 634 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 173,83 ಪಾಯಿಂಟ್‌ಗಳ ಚೇತರಿಕೆ ಕಂಡು 25,815.39 ಅಂಕಗಳಿಗೆ ತಲುಪಿದೆ. 
 
ತೈಲ ಮತ್ತು ಅನಿಲ ಹಾಗೂ ಗೃಹೋಪಕರಣ ವಸ್ತುಗಳ ಕ್ಷೇತ್ರದ ಶೇರುಗಳ ಖರೀದಿ ಭರಾಟೆಯಲ್ಲಿ ಹೆಚ್ಚಳವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 42.80 ಪಾಯಿಂಟ್‌ಗಳ ಏರಿಕೆಯಾಗಿ 7706.70 ಅಂಕಗಳಿಗೆ ತಲುಪಿದೆ.
 
ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಎಚ್‌ಡಿಎಫ್ಸಿ ಲಿಮಿಟೆಡ್ ಬ್ಯಾಂಕ್ ಶೇರುಗಳು ಇಂದಿನ ಆರಂಭಿಕ ವಹಿವಾಟಿನಲ್ಲಿ ಚೇತರಿಕೆ ಕಂಡಿವೆ. 
 
 
 
 

Share this Story:

Follow Webdunia kannada