ಯುರೋಪ್ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 90 ಪಾಯಿಂಟ್‌ಗಳ ಕುಸಿತ ಕಂಡಿದೆ
ಬಿಎಸ್‌ಇ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 89.84 ಪಾಯಿಂಟ್‌ಗಳ ಕುಸಿತ ಕಂಡು 27,697.69 ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 32.70 ಪಾಯಿಂಟ್‌ಗಳ ಕುಸಿತ ಕಂಡು 8,508.70 ಅಂಕಗಳಿಗೆ ತಲುಪಿದೆ.
ಹಾಂಗ್‌ಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪೂರ್ ಮತ್ತು ತೈವಾನ್ ಶೇರುಪೇಟೆಗಳು ಶೇ.0.12 ರಷ್ಟು ಏರಿಕೆ ಕಂಡಿದ್ದರೆ, ಚೀನಾ ಶೇರುಪೇಟೆ ಶೇ.0.35 ರಷ್ಟು ಕುಸಿತ ಕಂಡಿದೆ.
ಫ್ರಾನ್ಸ್ ಮತ್ತು ಜರ್ಮನಿ ಶೇರುಪೇಟೆಗಳು ವಹಿವಾಟಿನಲ್ಲಿ ಕುಸಿತ ಕಂಡಿದ್ದರೆ, ಯುನೈಟೆಡ್ ಕಿಂಗ್‌ಡಮ್ ಶೇರುಪೇಟೆ ಶೇ.0.35 ರಷ್ಟು ಚೇತರಿಕೆ ಕಂಡಿದೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.