ಏರ್ ಇಂಡಿಯಾದಲ್ಲಿ ಪದೇ ಪದೇ ಸಮಸ್ಯೆ: ಏರ್ ಇಂಡಿಯಾ ಹೆಸರೇ ಚೇಂಜ್ ಮಾಡಿ ಅಂತಿದ್ದಾರೆ ಪಬ್ಲಿಕ್

Krishnaveni K
ಬುಧವಾರ, 18 ಜೂನ್ 2025 (09:55 IST)
ನವದೆಹಲಿ: ಅಹಮದಾಬಾದ್ ಏರ್ ಇಂಡಿಯಾ ವಿಮಾನ ಪತನದ ಬಳಿಕ ನಿನ್ನೆ ಒಂದೇ ದಿನ 8 ವಿಮಾನಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು ಜನರು ಈಗ ಬುಕಿಂಗ್ ಮಾಡಲೂ ಹಿಂದೇಟು ಹಾಕುವಂತಾಗಿದೆ. ಹೀಗಾಗಿ ಏರ್ ಇಂಡಿಯಾದಿಂದ ಇಂಡಿಯಾ ಹೆಸರೇ ಕೈ ಬಿಡುವಂತೆ ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಆಗ್ರಹಿಸಿದ್ದಾರೆ.

ಅಹಮದಾಬಾದ್ ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಪತನ ದುರಂತವನ್ನು ಯಾರೂ ಮರೆಯಲು ಸಾಧ್ಯವಿಲ್ಲ. 242 ಪ್ರಯಾಣಿರನ್ನು ಹೊತ್ತು ಲಂಡನ್ ನತ್ತ ಹೊರಟಿದ್ದ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತ್ತು. ಪರಿಣಾಮ 241 ಪ್ರಯಾಣಿಕರು ಸೇರಿದಂತೆ 270 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದರು.

ಇದಾದ ಬಳಿಕ ಏರ್ ಇಂಡಿಯಾ ವಿಮಾನದ ಒಂದೊಂದೇ ಹುಳುಕುಗಳು ಬಯಲಾಗುತ್ತಿದೆ. ಇದೀಗ ಏರ್ ಇಂಡಿಯಾ ಸಂಸ್ಥೆಯ 8 ಅಂತಾರಾಷ್ಟ್ರೀಯ ವಿಮಾನಗಳು ತಾಂತ್ರಿಕ ಸಮಸ್ಯೆಯಿಂದಾಗಿ ರದ್ದಾಗಿದೆ. ಇದನ್ನು ನೋಡುತ್ತಿದ್ದರೆ ಜನ ಈಗ ಏರ್ ಇಂಡಿಯಾ ವಿಮಾನ ಬುಕ್ ಮಾಡಲೂ ಹಿಂದೇಟು ಹಾಕುವಂತಾಗಿದೆ.

ಇನ್ನು ಕೆಲವರು ಏರ್ ಇಂಡಿಯಾ ವಿಮಾನದ ಹೆಸರಿನಿಂದ ಇಂಡಿಯಾ ಎಂದು ಕಿತ್ತು ಹಾಕಿ ನಮ್ಮ ದೇಶದ ಮರ್ಯಾದೆ ಉಳಿಸಿ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಕಷ್ಟು ವಿಮಾನಗಳಲ್ಲಿ ಸಮಸ್ಯೆ ಕಂಡುಬಂದಿದ್ದರಿಂದ ವಿಮಾನಯಾನ ಆಂತರಿಕ ನಿರ್ದೇಶನಾಲಯ ತಪಾಸಣೆಯನ್ನೂ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments