ನವದೆಹಲಿ : ಉತ್ತರಾಖಂಡದ ತೆಹ್ರಿಯಲ್ಲಿ ಭಾನುವಾರ ಬೆಳಗ್ಗೆ 8:33 ರ ಸುಮಾರಿಗೆ 4.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಉತ್ತರಾಖಂಡದಲ್ಲಿ ಉಂಟಾಗಿರುವ ಭೂಕಂಪದ ಬೆನ್ನಲ್ಲೇ ದೆಹಲಿ-ಎನ್ಸಿಆರ್ನಲ್ಲೂ ಲಘು ಭೂಕಂಪದ ಅನುಭವವಾಗಿರುವುದಾಗಿ ವರದಿಯಾಗಿದೆ. ಸದ್ಯ ಎಲ್ಲಿಯೂ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ.
ಎನ್ಸಿಎಸ್ ಪ್ರಕಾರ, ಭೂಕಂಪದ ಕೇಂದ್ರ ಬಿಂದುವನ್ನು ಉತ್ತರಕಾಶಿಯ ಪೂರ್ವ-ಆಗ್ನೇಯಕ್ಕೆ 17 ಕಿ.ಮೀ. ದೂರದಲ್ಲಿ 5 ಕಿ.ಮೀ. ಆಳದಲ್ಲಿ ಗುರುತಿಸಲಾಗಿದೆ. ಈ ಬಗ್ಗೆ ಎನ್ಸಿಎಸ್ ಟ್ವೀಟ್ ಮಾಡಿದೆ.