Select Your Language

Notifications

webdunia
webdunia
webdunia
webdunia

ಲೈಂಗಿಕ ದೌರ್ಜನ್ಯ ಆರೋಪ : ಇಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ

ಲೈಂಗಿಕ ದೌರ್ಜನ್ಯ ಆರೋಪ : ಇಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ
ನವದೆಹಲಿ , ಶುಕ್ರವಾರ, 28 ಏಪ್ರಿಲ್ 2023 (13:23 IST)
ನವದೆಹಲಿ : ಬಿಜೆಪಿ ಸಂಸದ ಹಾಗೂ ಭಾರತದ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ಭೂಷಣ್ ಶಂಕರ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿ ತುರ್ತು ವಿಚಾರಣೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಶುಕ್ರವಾರ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.
 
ಈ ವರ್ಷದ ಆರಂಭದಲ್ಲಿ ಪ್ರತಿಭಟನೆ ನಡೆಸಿದ್ದ ಭಾರತದ ಕುಸ್ತಿಪಟುಗಳು ಮತ್ತೆ ಪ್ರತಿಭಟನೆಗೆ ಮುಂದಾಗಿದ್ದು ನ್ಯಾಯ ಕೊಡಿಸುವಂತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಕುಸ್ತಿಪಟುಗಳ ಮನವಿ ಮೇರೆಗೆ ಸುಪ್ರೀಂ ಕೋರ್ಟ್ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿತ್ತು. ಆದರೆ ಈ ಸಂಬಂಧ ಯಾವುದೇ ಪ್ರಕರಣ ಸಹ ದಾಖಲಾಗಿಲ್ಲ ಎಂದು ತಿಳಿದುಬಂದಿದೆ.

ಇದರಿಂದ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿರುವ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಬಗ್ಗೆ ಅರ್ಜಿಯಲ್ಲಿ ಗಂಭೀರ ಆರೋಪಗಳನ್ನ ಮಾಡಿದ್ದಾರೆ. ಈ ವಿಷಯವನ್ನು ನ್ಯಾಯಾಲಯವು ಪರಿಗಣಿಸಬೇಕು ಎಂದು ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠ ಹೇಳಿತ್ತು. 

ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು, ಈ ಸಂಬಂಧ ಪ್ರಕರಣ ದಾಖಲಿಸುವವರೆಗೂ ತಾವು ಪ್ರತಿಭಟನೆ ಕೈಬಿಡುವುದಿಲ್ಲ ಎಂಬುದಾಗಿ ಪ್ರತಿಪಾದಿಸಿದ್ದಾರೆ. ಅವರಲ್ಲಿ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರಂತಹ ಸ್ಟಾರ್ ಕುಸ್ತಿಪಟುಗಳೂ ಇದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಡೊನಾಲ್ಡ್ ಟ್ರಂಪ್ ನನ್ನ ರೇಪ್ ಮಾಡಿದ್ದರು : ಇ ಜೀನ್ ಕ್ಯಾರೋಲ್