ಟಿವಿ ವರದಿಗಾರನಿಂದ ಪತ್ರಕರ್ತೆಗೆ ಲೈಂಗಿಕ ಕಿರುಕುಳ

Webdunia
ಶನಿವಾರ, 8 ಡಿಸೆಂಬರ್ 2018 (07:09 IST)
ನವದೆಹಲಿ : ಟಿವಿ ವರದಿಗಾರನೊಬ್ಬ ಪತ್ರಕರ್ತೆ ಮಹಿಳೆಯೊಬ್ಬಳನ್ನು ಅಪಹರಿಸಿ ಆಕೆಗೆ ದೈಹಿಕ ಹಾಗೂ  ಲೈಂಗಿಕ ಕಿರುಕುಳ ನೀಡಿದ ಆರೋಪವೊಂದು ಕೇಳಿಬಂದಿದೆ.


ರಿಪಬ್ಲಿಕ್ ಟಿವಿಯ ಅಸ್ಸಾಂ ಪ್ರತಿನಿಧಿ ಅನಿರುದ್ಧ್ ಬಕತ್ ಎಂಬುವವರು ಗುವಾಹಟಿ ಮೂಲದ ಪತ್ರಕರ್ತೆಯೊಬ್ಬಳನ್ನು ಅಪಹರಿಸಿ ಜೋಯ್‌ನಗರದಲ್ಲಿರುವ ಮನೆಯೊಂದರಲ್ಲಿ ಕೂಡಿ ಹಾಕಿ ಆಕೆಗೆ ದೈಹಿಕ ಹಾಗೂ  ಲೈಂಗಿಕ ಕಿರುಕುಳ ನೀಡಿದ್ದಾರೆ. ನಂತರ ಆಕೆಯ ಸಹೋದ್ಯೋಗಿಗಳು ಆಕೆಯನ್ನು ರಕ್ಷಿಸಿದ್ದಾರೆ.


ಈ ಘಟನೆಗೆ ಸಂಬಂಧಿಸಿದಂತೆ ಪತ್ರಕರ್ತೆ ಬಕತ್ ವಿರುದ್ಧ ಗುವಾಹಟಿಯ ದಿಸ್ಪುರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ಈ ಹಿನ್ನಲೆಯಲ್ಲಿ ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354, 341, 392, 323,506 ಮತ್ತು 34ರ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


ಆದರೆ ಬಂಧನದ ಎರಡು ದಿನಗಳ ನಂತರ ಆರೋಪಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಂತ್ರಸ್ತೆ ಪೊಲೀಸರು ಹೊರಗಿನ ಒತ್ತಡಕ್ಕೆ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸದೆಯೇ ಬಿಡುಗಡೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೇಕ್ ಫಾಸ್ಟ್ ಮುಗಿಸಿ ಮಹತ್ವದ ಹೇಳಿಕೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಹಳಸಿದ ಸಂಬಂಧಕ್ಕೆ ತೇಪೆ ಹಾಕಲು ಬ್ರೇಕ್ ಫಾಸ್ಟ್ ಮೀಟಿಂಗ್: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆ ತಂದ್ರೂ ಎಲ್ರೂ ಮೋದಿ ಮೋದಿ ಅಂತಾರೆ: ಸಿದ್ದರಾಮಯ್ಯ ಬೇಸರ

ಮುಂದಿನ ಸುದ್ದಿ