Select Your Language

Notifications

webdunia
webdunia
webdunia
webdunia

ಹಾಸ್ಟೆಲ್ ಲಿಫ್ಟಿನಲ್ಲಿ ಸ್ವಚ್ಛತಾ ಸಿಬ್ಬಂದಿಯಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

ಹಾಸ್ಟೆಲ್ ಲಿಫ್ಟಿನಲ್ಲಿ ಸ್ವಚ್ಛತಾ ಸಿಬ್ಬಂದಿಯಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ
ಚೆನ್ನೈ , ಭಾನುವಾರ, 25 ನವೆಂಬರ್ 2018 (07:13 IST)
ಚೆನ್ನೈ : ಸ್ವಚ್ಛತಾ ಸಿಬ್ಬಂದಿಯೊಬ್ಬ ಹಾಸ್ಟೆಲ್ ಲಿಫ್ಟಿನಲ್ಲಿ ವಿದ್ಯಾರ್ಥಿನಿಯ ಎದುರು ಹಸ್ತಮೈಥುನ ಮಾಡಿ ಲೈಂಗಿಕ ಕಿರುಕುಳ ನೀಡಿದ ಘಟನೆ ಚೆನ್ನೈನ ಹೊರವಲಯದಲ್ಲಿರುವ ಎಸ್‍.ಆರ್‍.ಎಂ ವಿಶ್ವವಿದ್ಯಾಲಯದಲ್ಲಿ ನಡೆದಿದೆ.


ವಿದ್ಯಾರ್ಥಿನಿ ಲಿಫ್ಟ್ ನಲ್ಲಿ ಹೋಗುತ್ತಿದ್ದ ವೇಳೆ ಅಲ್ಲಿಗೆ ಬಂದ ಸಿಬ್ಬಂದಿ ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಆಕೆಯ ಮುಂದೆಯೇ ಹಸ್ತಮೃಥುನ ಮಾಡಿ ಲೈಂಗಿಕವಾಗಿ ಕಿರುಕುಳ ನೀಡಿದ್ದಾನೆ. ಕೂಡಲೇ ವಿದ್ಯಾರ್ಥಿನಿ ಈ ಘಟನೆ ಬಗ್ಗೆ ಹಾಸ್ಟೆಲ್ ವಾರ್ಡನ್ ಗೆ ದೂರು ನೀಡಿದ್ದಾಳೆ. ಆದರೆ ಘಟನೆಯ ಬಗ್ಗೆ ಸಾಕ್ಷಿ ನೀಡಿದ್ದರೂ ಕೂಡ ಎರಡು ಗಂಟೆ ತಡಮಾಡಿ ದೂರು ತೆಗೆದುಕೊಂಡಿದ್ದಲ್ಲದೇ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿ ವಿಶ್ವವಿದ್ಯಾಲಯದ ಆವರಣದಲ್ಲಿ ತೀವ್ರ ಪ್ರತಿಭಟನೆ ನಡೆಸಿದ್ದಾರೆ.


ಇದೀಗ ಪೊಲೀಸರು ಆರೋಪಿ ಸ್ವಚ್ಛತಾ ಸಿಬ್ಬಂದಿಯನ್ನು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ನಟ ಅಂಬರೀಶ್ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ ಎಚ್.ಡಿ.ಕುಮಾರಸ್ವಾಮಿ