Webdunia - Bharat's app for daily news and videos

Install App

ಮಲೆಯಾಳಂ ನಟಿಗೆ ಲೈಂಗಿಕ ಕಿರುಕುಳ- ಚಾರ್ಜ್‍‍ ಶೀಟ್‍ ಒಪ್ಪಿಕೊಂಡ ಕೋರ್ಟ್

Webdunia
ಮಂಗಳವಾರ, 5 ಡಿಸೆಂಬರ್ 2017 (20:05 IST)
ಮಲೆಯಾಳಂ ನಟಿಯ ಅಪಹರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ನಟ ದಿಲೀಪ್ ಅವರ ವಿರುದ್ಧ ಸಲ್ಲಿಸಿರುವ ಚಾರ್ಜ್ ಶೀಟ್‍‍ನ್ನು ಕೇರಳ ವಿಚಾರಣಾ ಕೋರ್ಟ್ ಒಪ್ಪಿಕೊಂಡಿದೆ.
 
ದಿಲೀಪ್ ಹಾಗೂ ಅವರ ಮಾಜಿ ಪತ್ನಿ ಮಂಜು ವಾರಿಯರ್ ಸೇರಿದಂತೆ 12 ಮಂದಿ ವಿರುದ್ಧ ನವೆಂಬರ್ 22ರಂದು ಸಲ್ಲಿಕೆಯಾಗಿದ್ದ  650 ಪುಟಗಳ ಚಾರ್ಜ್ ಶೀಟ್‍‍ನ್ನು ಅಂಗಮಲ್ಯ ಕೋರ್ಟ್ ಒಪ್ಪಿಕೊಂಡಿದ್ದು, 385 ಸಾಕ್ಷಿಗಳು ಮತ್ತು 12 ಗೌಪ್ಯ ಹೇಳಿಕೆಗಳನ್ನು ಉಲ್ಲೇಖಿಸಿದ್ದಾರೆ. ಇದರಲ್ಲಿ ಚಿತ್ರೋದ್ಯಮದ 50 ಸಾಕ್ಷಿಗಳಿವೆ.

ಎರ್ನಾಕುಲಂಗೆ ಪ್ರಯಾಣಿಸುತ್ತಿದ್ದ ನಟಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪ್ರಮುಖ ಆರೋಪಿ ಪಲ್ಸರ್ ಸುನಿಯನ್ನು ಫೆ.23ರಂದು ಪೊಲೀಸರು ಬಂಧಿಸಿದ್ದರು. ಇದೇ ಪ್ರಕರಣ ಸಂಬಂಧ ನಟ ದಿಲೀಪ್ ಅವರನ್ನು ಸಹ ಕಳೆದ ಜುಲೈ10 ರಂದು ಬಂಧಿಸಲಾಗಿತ್ತು. ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ