ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಶಕ್ತಿ ಚಂಡಮಾರುತ ಕಂಡುಬರಲಿದ್ದು, ದೇಶದ ನಾನಾ ಜಿಲ್ಲೆಗಳಲ್ಲಿ ನಾಳೆ ಹೈ ಅಲರ್ಟ್ ಘೋಷಿಸಲಾಗಿದೆ.
ಮುಂಬೈ ಕರಾವಳಿಗೆ ಶಕ್ತಿ ಚಂಡಮಾರುತ ಅಪ್ಪಳಿಸಲಿದ್ದು, ಮಹಾರಾಷ್ಟ್ರದಲ್ಲಿ ಭಾರೀ ಮಳೆಯ ಸಾಧ್ಯತೆಯಿದೆ. ಚಂಡಮಾರುತದ ಪರಿಣಾಮ ಕರ್ನಾಟಕ, ಮಹಾರಾಷ್ಟ್ರ, ಗುಜರಾತ್ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಒಂದು ವಾರಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ.
ತಜ್ಞರ ಪ್ರಕಾರ ಈಶಾನ್ಯ ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ತೀವ್ರಗೊಳ್ಳುತ್ತಿದೆ. ನಾಳೆ ಬೆಳಿಗ್ಗೆ ಗುಜರಾತ್ ಕಡೆಗೂ ಚಂಡಮಾರುತದ ಗಾಳಿ ಬೀಸುವ ಸಂಭವವಿದೆ. ಮಹಾರಾಷ್ಟ್ರ ಮತ್ತು ಗುಜರಾತ್ ಕರಾವಳಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ವೇಳೆ ಯಾರೂ ಸಮುದ್ರ ತೀರಗಳಿಗೆ ತೆರಳದಂತೆ ಸೂಚಿಸಲಾಗಿದೆ. ಕರಾವಳಿಯ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದ್ದು ಮುನ್ನೆಚ್ಚರಿಕೆ ವಹಿಸಲಾಗಿದೆ.