Publish Date: Wed, 12 Dec 2018 (07:31 IST)
Updated Date: Wed, 12 Dec 2018 (07:33 IST)
ನವದೆಹಲಿ : ಆರ್‌ಬಿಐ ಗವರ್ನರ್ ಆಗಿ ಹಣಕಾಸು ಸಚಿವಾಲಯದ ಮಾಜಿ ಅಧಿಕಾರಿ ಶಕ್ತಿಕಾಂತ ದಾಸ್ ಅವರನ್ನು ನೇಮಕ ಮಾಡಲಾಗಿದೆ.
ಆರ್‌ಬಿಐ ಗವರ್ನರ್ ಉರ್ಜಿತ್ ಪಟೇಲ್ ಸೋಮವಾರ ತನ್ನ ಹುದ್ದೆಗೆ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಇದೀಗ ಕೇಂದ್ರ ಸರ್ಕಾರದ ಆದೇಶದ ಮೇರೆಗೆ ಶಕ್ತಿಕಾಂತ ದಾಸ್ ಅವರನ್ನು ನೇಮಕ ಮಾಡಲಾಗಿದೆ.
ಶಕ್ತಿಕಾಂತ ದಾಸ್ ಅವರು 2015 ರಿಂದ 2017 ರವರೆಗೆ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಹಾಗೂ ಕೇಂದ್ರ ಬ್ಯಾಂಕ್ ಜೊತೆ ಕೆಲಸ ಮಾಡಿದ ಅನುಭವ ಕೂಡ ಹೊಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.