Select Your Language

Notifications

webdunia
webdunia
webdunia
webdunia

ಬೆಂಗಳೂರಿನ ಪಾರ್ಟಿಯಲ್ಲಿ ಡ್ರಗ್ಸ್: ಬಾಲಿವುಡ್ ನಟನ ಪುತ್ರ ಸೇರಿ 50 ಮಂದಿ ಅರೆಸ್ಟ್!

ಬೆಂಗಳೂರಿನ ಪಾರ್ಟಿಯಲ್ಲಿ ಡ್ರಗ್ಸ್: ಬಾಲಿವುಡ್ ನಟನ ಪುತ್ರ ಸೇರಿ 50 ಮಂದಿ ಅರೆಸ್ಟ್!
bengaluru , ಸೋಮವಾರ, 13 ಜೂನ್ 2022 (15:41 IST)

ತಡರಾತ್ರಿಯಾದರೂ ನಡೆಯುತ್ತಿದ್ದ ಪಾರ್ಟಿಯಲ್ಲಿ ಡ್ರಗ್ಸ್ ಬಳಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಿದ ಬೆಂಗಳೂರಿನ ಹಲಸೂರು ಪೊಲೀಸರು ಬಾಲಿವುಡ್ ನಟಿ ಶ್ರದ್ಧಾಕಪೂರ್ ಸೋದರ ಸೇರಿದಂತೆ ಹಲವು ಗಣ್ಯರನ್ನು ವಶಕ್ಕೆ ಪಡೆದಿದ್ದಾರೆ.

ಎಂ.ಜಿ ರಸ್ತೆಯ ಟ್ರಿನಿಟಿ ಸರ್ಕಲ್ನಲ್ಲಿರುವ ಪ್ರತಿಷ್ಠಿತ ಹೋಟೆಲ್ ನಲ್ಲಿ ತಡರಾತ್ರಿಯಾದರೂ ಪಾರ್ಟಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಹಲಸೂರು ಪೊಲೀಸರು ಭಾನುವಾರ ಮುಂಜಾನೆ ದಾಳಿ ನಡೆಸಿ ಪಾರ್ಟಿಯಲ್ಲಿ ತೊಡಗಿದ್ದ 50 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಇವರಲ್ಲಿ ರಾಜಕೀಯ ನಾಯಕರ ಮಕ್ಕಳು ಇದ್ದರು ಎನ್ನಲಾಗಿದೆ.

ವಶಕ್ಕೆ ಪಡೆದಿದ್ದ 50 ಜನರ ಪೈಕಿ 35 ಮಂದಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, 5 ಮಂದಿ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದೆ. ಆದರೆ ಅವರು ಯಾರು ಎಂಬ ಬಗ್ಗೆ ಪೊಲೀಸರು ಗುಟ್ಟು ಬಿಟ್ಟುಕೊಟ್ಟಿಲ್ಲ.

ಪಾರ್ಟಿಯಲ್ಲಿ ಇದ್ದ ಬಾಲಿವುಡ್ ಹಿರಿಯ ನಟ ಶಕ್ತಿ ಕಪೂರ್ ಪುತ್ರ ಹಾಗೂ ನಟಿ ಶ್ರದ್ಧಾ ಕಪೂರ್ ಸಹೋದರ ಸಿದ್ಧಾಂತ್ ಕಪೂರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಸಿದ್ಧಾಂತ್ ಹೋಟೆಲ್ನಲ್ಲಿ ಡಿಜೆ ಪ್ಲೈಯರ್ ಆಗಿದ್ದು, ಡ್ರಗ್ಸ್ ಸೇವನೆ ಮಾಡಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.

ಹಲಸೂರು ಇನ್ ಸ್ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಹೆಚ್ಚು ಪೊಲೀಸರ ತಂಡ ದಾಳಿ ಮಾಡಿದ್ದು, ಘಟನಾ ಸ್ಥಳದಲ್ಲಿದ್ದ ವಸ್ತುಗಳನ್ನು ಕೂಡ ವಶಕ್ಕೆ ಪಡೆದಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

3 ಗಂಟೆ ವಿಚಾರಣೆ ಎದುರಿಸಿದ ರಾಹುಲ್ ಗಾಂಧಿ!