Select Your Language

Notifications

webdunia
webdunia
webdunia
webdunia

ಚುನಾವಣೆಗೆ ಸ್ಪರ್ಧಿಸಲ್ಲ ಎಂದ ಶರದ್ ಪವಾರ್

ಚುನಾವಣೆಗೆ ಸ್ಪರ್ಧಿಸಲ್ಲ ಎಂದ ಶರದ್ ಪವಾರ್
ನವದೆಹಲಿ , ಬುಧವಾರ, 15 ಜೂನ್ 2022 (16:19 IST)
ನವದೆಹಲಿ : ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ನಿರಾಕರಿಸಿದ್ದಾರೆ.

ಆಡಳಿತ ಪಕ್ಷ ಹಾಗೂ ಪ್ರತಿ ಪಕ್ಷದ ನಾಯಕರೊಂದಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಂದು ನಡೆಸಿದ ಮಹತ್ವದ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಿದ್ದಾರೆ.

ಸಭೆಯಲ್ಲಿ ನಾನು ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಏಕೆಂದರೆ ಸಕ್ರೀಯ ರಾಜಕಾರಣದ ಇನ್ನಿಂಗ್ಸ್ ಇನ್ನೂ ಇದೆ. ಹಾಗಾಗಿ ನಾನು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ಎನ್ಸಿಪಿ ಮುಖ್ಯಸ್ಥ ಮತ್ತು ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಅವರನ್ನು ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಪ್ರಮುಖ ಪ್ರಕ್ಷಗಳು ಒಮ್ಮತದ ನಿರ್ಧಾರ ಕೈಗೊಂಡಿದ್ದವು. ಇತ್ತೀಚೆಗೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಶರದ್ ಪವಾರ್ ಅವರನ್ನು ಭೇಟಿಯಾಗಿದ್ದರು.

ಸೋನಿಯಾ ಗಾಂಧಿ ಅವರ ನಿರ್ದೇಶನದಂತೆ ಪವಾರ್ ಅವರನ್ನು ಭೇಟಿ ಮಾಡಿ, ಒಮ್ಮತದ ಅಭ್ಯರ್ಥಿಯಾಗಿ ಬೆಂಬಲಿಸುವ ಬಗ್ಗೆ ಚರ್ಚಿಸಿರುವುದಾಗಿಯೂ ಖರ್ಗೆ ಸ್ಪಷ್ಟಪಡಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

5ಜಿ ಹರಾಜಿಗೆ ಕ್ಯಾಬಿನೆಟ್ ಅನುಮೋದನೆ