ಬೆಂಗಳೂರು: ಕಾಮಗ್ರೆಸ್ ಸಂಸದ ಶಶಿ ತರೂರ್ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡ ಪೋಸ್ಟ್‌ವೊಂದು ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ. ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ತಮ್ಮ ಪಕ್ಷದ ಹೈಕಮಾಂಡ್ ಮೇಲೆ ಮುನಿಸಿಕೊಂಡಿರುವ ಬೆನ್ನಲ್ಲೇ ಶಶಿ ಅವರು ನಗುತ್ತಾ ಪೋಟೋಗೆ ಪೋಸ್ ನೀಡಿರುವ ಮರ್ಮವೇನು ಎಂದು ಪ್ರಶ್ನೆ ಹುಟ್ಟು ಹಾಕಿದೆ.
ಫೋಟೋದಲ್ಲಿ ಶಶಿ ತರೂರ್ ಅವರು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಮತ್ತು ಬ್ರಿಟಿಷ್ ವ್ಯಾಪಾರ ಕಾರ್ಯದರ್ಶಿ ಜೊನಾಥನ್ ರೆನಾಲ್ಡ್ ಅವರೊಂದಿಗೆ ನಗೆಬೀರಿ ಸೆಲ್ಫಿಗೆ ಪೋಸ್ ನೀಡುತ್ತಿರುವುದನ್ನು ಕಾಣಬಹುದು.
ಎಕ್ಸ್‌ನಲ್ಲಿ ಫೋಟೋ ಹಂಚಿಕೊಂಡು ಬರೆದ ತರೂರ್ ಅವರು, "ಬ್ರಿಟನ್‌ನ ವ್ಯವಹಾರ ಮತ್ತು ವ್ಯಾಪಾರದ ಕಾರ್ಯದರ್ಶಿ ಜೊನಾಥನ್ ರೆನಾಲ್ಡ್ಸ್ ಅವರೊಂದಿಗೆ ತಮ್ಮ ಭಾರತೀಯ ಸಹವರ್ತಿ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರ ಜೊತೆಯಲ್ಲಿ ಮಾತುಗಳನ್ನು ವಿನಿಮಯ ಮಾಡಿಕೊಳ್ಳುವುದು ಒಳ್ಳೆಯದು. ದೀರ್ಘಕಾಲದಿಂದ ಸ್ಥಗಿತಗೊಂಡಿದ್ದ FTA ಮಾತುಕತೆಗಳನ್ನು ಪುನರುಜ್ಜೀವನಗೊಳಿಸಲಾಗಿದೆ, ಇದು ಅತ್ಯಂತ ಸ್ವಾಗತಾರ್ಹವಾಗಿದೆ."
ಕೇರಳದ ಆಡಳಿತಾರೂಢ ಸಿಪಿಎಂ ನೇತೃತ್ವದ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ ಸರ್ಕಾರದ ನೀತಿಗಳನ್ನು ಶ್ಲಾಘಿಸಿದ ನಂತರ ತರೂರ್ ಮತ್ತು ಕಾಂಗ್ರೆಸ್ ನಡುವಿನ ಸಂಬಂಧ ಹಳಸಿದ ಊಹಾಪೋಹಗಳ ಮಧ್ಯೆ ಇದು ಬಂದಿದೆ.<>