Select Your Language

Notifications

webdunia
webdunia
webdunia
webdunia

ಮಹಾರಾಷ್ಟ್ರದಲ್ಲಿ ಹೈಡ್ರಾಮಾ: ಸಂಜೆ ಏಕನಾಥ್‌ ಶಿಂಧೆ ಪ್ರಮಾಣವಚನ

ekanth Shinde devendra Fadnavis Maharashtra ಮಹಾರಾಷ್ಟ್ರ ಏಕನಾಥ್‌ ಶಿಂಧೆ ದೇವೇಂದ್ರ ಫಡ್ನವೀಸ್
bengaluru , ಗುರುವಾರ, 30 ಜೂನ್ 2022 (17:11 IST)
ಮಹಾರಾಷ್ಟ್ರ ರಾಜಕೀಯದಲ್ಲಿ ನಡೆಯುತ್ತಿರುವ ಹೈಡ್ರಾಮ ಕ್ಷಣಕ್ಷಣಕ್ಕೂ ತಿರುವು ಪಡೆಯುತ್ತಿದ್ದು, ಶಿವಸೇನೆ ಬಂಡಾಯ ಶಾಸಕ ಏಕನಾಥ್‌ ಶಿಂಧೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಬಿಜೆಪಿ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್‌ ಪ್ರಮಾಣ ವಚನ ಸ್ವೀಕಾರಕ್ಕೂ ಕೆಲವೇ ಗಂಟೆಗಳ ಮುನ್ನ ಮುಖ್ಯಮಂತ್ರಿ ಆಗುವುದಿಲ್ಲ. ಶಿವಸೇನೆ ಬಂಡಾಯ ಶಾಸಕರು ಸರಕಾರ ರಚಿಸಲಿದ್ದು,  ಬಿಜೆಪಿ ಬೆಂಬಲ ನೀಡಲಿದೆ ಎಂದು ಘೋಷಿಸಿದ್ದಾರೆ.
ರಾಜ್ಯಪಾಲರನ್ನು ಭೇಟಿ ಮಾಡಿ ಸರಕಾರ ರಚನೆಗೆ ಹಕ್ಕು ಮಂಡಿಸಿದ ನಂತರ ಮಾತನಾಡಿದ ಫಡ್ನವೀಸ್‌, ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಏಕನಾಥ್‌ ಶಿಂಧೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಅವರಿಗೆ ಬಿಜೆಪಿ ಬೆಂಬಲ ನೀಡಲಾಗುವುದು ಎಂದರು.
ನಂತರ ಮಾತನಾಡಿದ ಏಕನಾಥ್‌ ಶಿಂಧೆ, ಬಾಳಸಾಹೇಬ್‌ ಠಾಕ್ರೆ ಅವರ ಸಿದ್ಧಾಂತದ ಮೇಲೆ ಸರಕಾರ ರಚನೆ ಆಗಲಿದ್ದು, ಮಹಾರಾಷ್ಟ್ರದ ಸಮಗ್ರ ಅಭಿವೃದ್ಧಿ ನಮ್ಮ ಉದ್ದೇಶ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಗೆದ್ದು ಕಾಂಗ್ರೆಸ್ ಸರ್ಕಾರ ರಚಿಸೋದು ಗ್ಯಾರಂಟಿ : ಸಿದ್ದರಾಮಯ್ಯ