Select Your Language

Notifications

webdunia
webdunia
webdunia
webdunia

ಚುನಾವಣೆಯ ಬಳಿಕ MVA ಸರ್ಕಾರಕ್ಕೆ ಮತ್ತೆ ಶಾಕ್ !

ಚುನಾವಣೆಯ ಬಳಿಕ MVA ಸರ್ಕಾರಕ್ಕೆ ಮತ್ತೆ ಶಾಕ್ !
ಮುಂಬೈ , ಮಂಗಳವಾರ, 21 ಜೂನ್ 2022 (10:38 IST)
ಮುಂಬೈ : ರಾಜ್ಯಸಭಾ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರಕ್ಕೆ ಶಾಕ್ ನೀಡಿದ್ದ ಬಿಜೆಪಿ ಈಗ ವಿಧಾನ ಪರಿಷತ್ ಚುನಾವಣೆಯಲ್ಲೂ ಶಾಕ್ ನೀಡಿದೆ.

ಬಿಜೆಪಿ ತನ್ನ 5ನೇ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡಿದ್ದರಿಂದ ಮಹಾರಾಷ್ಟ್ರದಲ್ಲಿ ಈಗ ರಾಜಕೀಯ ಚಟುವಟಿಕೆ ಬಿರುಸಾಗಿದೆ.

ಶಿವಸೇನೆಯ 56 ಶಾಸಕರ ಪೈಕಿ 4 ಶಾಸಕರು ಅಡ್ಡಮತದಾನ ಮಾಡಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯ ಒಟ್ಟು 288 ಸದಸ್ಯರ ಪೈಕಿ 285 ಶಾಸಕರು ಮತದಾನ ಮಾಡಲು ಅರ್ಹತೆ ಪಡೆದಿದ್ದರು.

ವಿಧಾನ ಸಭೆಯಲ್ಲಿ ಬಿಜೆಪಿ 106 ಶಾಸಕರ ಬಲವನ್ನು ಹೊಂದಿದೆ. ಆದರೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ 133 ಮತಗಳು ಬಿದ್ದಿದೆ. 

ಶಿವಸೇನೆ 56 ಶಾಸಕರ ಬೆಂಬಲವನ್ನು ಹೊಂದಿದ್ದು 52 ಮತಗಳನ್ನು ಪಡೆದಿದ್ದರೆ ಕಾಂಗ್ರೆಸ್ 44 ಶಾಸಕರ ಬಲವನ್ನು ಹೊಂದಿದ್ದು 41 ಮತಗಳನ್ನು ಪಡೆದಿದೆ. ಆದರೆ ಎನ್ಸಿಪಿ 53 ಶಾಸಕರ ಬಲವನ್ನು ಹೊಂದಿದ್ದು 57 ಮಂದಿ ವೋಟ್ ಹಾಕಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅತ್ಯಾಚಾರ : ಪಾಕಿಸ್ತಾನದ ಪಂಜಾಬ್‌ನಲ್ಲಿ ತುರ್ತು ಪರಿಸ್ಥಿತಿ!