ಕಳೆದ ಐದು ತಿಂಗಳುಗಳ ಅವಧಿಯಲ್ಲಿ 1012 ಅತ್ಯಾಚಾರ ಪ್ರಕರಣಗಳು ಮತ್ತು 4520 ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ ಎಂದು ಉತ್ತರಪ್ರದೇಶ ಸರಕಾರ ಮಾಹಿತಿ ನೀಡಿದೆ.
ಮಾರ್ಚ್ 15 2015ರಿಂದ ಆಗಸ್ಟ್ 18 ರವರೆಗೆ 1012 ಅತ್ಯಾಚಾರ ಪ್ರಕರಣಗಳು ಮತ್ತು 4520 ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು, 1386 ಲೂಟಿ ಪ್ರಕರಣಗಳು ಮತ್ತು 86 ದರೋಡೆ ಪ್ರಕರಣಗಳು ರಾಜ್ಯದಲ್ಲಿ ನಡೆದಿವೆ ಎಂದು ಉತ್ತರಪ್ರದೇಶ ಸರಕಾರ ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಸತೀಶ್ ಮಹಾನಾ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದೆ.
ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧಗಳನ್ನು ತಡೆಯಲು ಪ್ರತಿಯೊಂದು ಜಿಲ್ಲೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಅಪರಾಧ ದಳ ವಿಭಾಗ ಆರಂಭಿಸಲಾಗಿದೆ ಎಂದು ಸರಕಾರ ವಿಧಾನಸಭೆಗೆ ಮಾಹಿತಿ ನೀಡಿದೆ.
ಸೈಬರ್ ಅಪರಾಧ ಸೇರಿದಂತೆ ಇತರ ಅಪರಾಧಗಳನ್ನು ತಡೆಯಲು ಗಸ್ತು ತಿರುಗುವ ಸಿಬ್ಬಂದಿಗಳನ್ನು ಹೆಚ್ಚಿಸಲಾಗಿದೆ. ಮುಂಬರುವ ದಿನಗಳಲ್ಲಿ ಅಪರಾಧ ಸಂಖ್ಯೆಗಳಲ್ಲಿ ಇಳಿಮುಖವಾಗಿದೆ ಎಂದು ಉತ್ತರಪ್ರದೇಶದ ಗೃಹ ಸಚಿವರು ಸದನಕ್ಕೆ ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ