Select Your Language

Notifications

webdunia
webdunia
webdunia
webdunia

ಶಾಕಿಂಗ್: 70 ವರ್ಷದ ವೃದ್ಧೆಯ ಮೇಲೆ ಯುವಕನಿಂದ ಅತ್ಯಾಚಾರ

ಶಾಕಿಂಗ್: 70 ವರ್ಷದ ವೃದ್ಧೆಯ ಮೇಲೆ ಯುವಕನಿಂದ ಅತ್ಯಾಚಾರ
ಮಥುರಾ , ಮಂಗಳವಾರ, 22 ಮಾರ್ಚ್ 2016 (18:08 IST)
ಆಘಾತಕಾರಿ ಘಟನೆಯೊಂದರಲ್ಲಿ 70 ವರ್ಷ ವಯಸ್ಸಿನ ವೃದ್ಧೆಯ ಮೇಲೆ ಯುವಕನೊಬ್ಬ ಅತ್ಯಾಚಾರವೆಸಗಿದ ಹೇಯ ಘಟನೆ ಮಂತ್ರಜಾ ಗ್ರಾಮದಿಂದ ವರದಿಯಾಗಿದೆ.
 
ಕಳೆದ ರವಿವಾರದಂದು ರಾತ್ರಿ ಆರೋಪಿ 28 ವರ್ಷ ವಯಸ್ಸಿನ ಯುವಕ ಧರ್ಮೇಂದ್ರ, ವೃದ್ಧೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿ ಅತ್ಯಾಚಾರವೆಸಗುವುದನ್ನು ವೃದ್ಧೆ ತಡೆಯಲು ಪ್ರಯತ್ನಿಸಿದಾಗ ಆಕೆಯ ಮೇಲೆ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.
 
ಅತ್ಯಾಚಾರಕ್ಕೊಳಗಾದ ವೃದ್ಧೆಯ ಪುತ್ರ ನೀಡಿದ ದೂರಿನ ಮೇರೆಗೆ ಆರೋಪಿಯ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ನಂತರ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
 
ಅತ್ಯಾಚಾರಕ್ಕೊಳಗಾದ ವೃದ್ಧೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

Share this Story:

Follow Webdunia kannada