ರಾಜಸ್ಥಾನ : 13 ವರ್ಷ ಬಾಲಕಿ ಮೇಲೆ 16 ಜನರು ಸಾಮೂಹಿಕ ಅತ್ಯಾಚಾರ ಮಾಡಿರುವುದು ನಾಚಿಕೆಗೇಡಿನ ಘಟನೆ ಭರತ್‍ಪುರದ ರಾಜಸ್ಥಾನದಲ್ಲಿ ಬೆಳಕಿಗೆ ಬಂದಿದೆ.
									
			
			 
 			
 
 			
					
			        							
								
																	ಸಂತ್ರಸ್ತೆಯ ತಂದೆ, ಪೊಲೀಸ್ ಠಾಣೆಯಲ್ಲಿ ತನ್ನ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ ಎಂದು 16 ಜನರ ವಿರುದ್ಧ ದೂರು ನೀಡಿದ್ದು, ಪ್ರಸ್ತುತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
									
										
								
																	ಬಳಿಕ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಪೊಲೀಸರು ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣವು ಭರತ್‍ಪುರದ ಖೋಹ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
									
											
							                     
							
							
			        							
								
																	ಘಟನೆಯ ನಂತರ ಇಡೀ ಪ್ರದೇಶದ ಜನರು ಆರೋಪಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತನ್ನ 13 ವರ್ಷದ ಮಗಳನ್ನು ಕೆಲವರು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತೆಯ ತಂದೆ ದೂರು ದಾಖಲಿಸಿದ್ದಾರೆ ಎಂದು ಏರಿಯಾ ಸಿಒ ಆಶಿಶ್ ಕುಮಾರ್ ತಿಳಿಸಿದ್ದಾರೆ. 
									
			                     
							
							
			        							
								
																	ಸಂತ್ರಸ್ತೆ 16 ಜನರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸಲಾಗುತ್ತಿದೆ. ಮೂಲಗಳ ಪ್ರಕಾರ, ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಬಂಧಿಸಲು ಪೊಲೀಸರು ತೀವ್ರ ತನಿಖೆಯನ್ನು ಮಾಡುತ್ತಿದ್ದಾರೆ.