Daily Horoscope
✕

ಶಾಕಿಂಗ್ :‌ ಈ ಇಲಿ ಮಾಡಿದ ಕೆಲ್ಸ ನೋಡಿ !

Webdunia
ಗುರುವಾರ, 7 ಏಪ್ರಿಲ್ 2022 (14:04 IST)
ಅಹ್ಮದಾಬಾದ್ : ಇಲಿಯ ಆಟಕ್ಕೆ ಮನೆ ಬೆಂಕಿಗಾಹುತಿಯಾದ ಘಟನೆ ಗುಜರಾತ್ನ ಅಹ್ಮದಾಬಾದ್ನಲ್ಲಿ ನಡೆದಿದೆ. ಮನೆಯಲ್ಲಿ ದೇವರ ದೀಪ ಉರಿಸಲು ಬತ್ತಿ ಇಟ್ಟು ದೀಪ ಹಚ್ಚಲಾಗಿತ್ತು.
 
ಈ ದೀಪ ಉರಿಯುತ್ತಿರುವಾಗಲೇ ಇಲಿಯೊಂದು ಬತ್ತಿಯನ್ನು ಹೊತ್ತೊಯ್ದಿದೆ. ಅಲ್ಲದೇ ಬೆಂಕಿ ಉರಿಯುತ್ತಿದ್ದ ಬತ್ತಿಯೊಂದಿಗೆ ಮನೆ ತುಂಬೆಲ್ಲಾ ಓಡಾಡಿದೆ. ಪರಿಣಾಮ ಬಟ್ಟೆಗೆ ಬತ್ತಿಯಿಂದ ಬೆಂಕಿ ಹೊತ್ತಿಕೊಂಡಿದ್ದು, ಮನೆಯೆಲ್ಲಾ ಬೆಂಕಿ ಆವರಿಸಿದೆ. ಪರಿಣಾಮ ಮನೆಯಲ್ಲಿ ಇಟ್ಟಿದದ ಎರಡು ಲಕ್ಷ ನಗದು ಹಾಗೂ ಇನ್ನಿತರ ವಸ್ತುಗಳು ಬೆಂಕಿಗಾಹುತಿಯಾಗಿದೆ ಎಂದು ತಿಳಿದು ಬಂದಿದೆ.

ಕರ್ಮಭೂಮಿ ಸೊಸೈಟಿಯಲ್ಲಿರುವ ಉದ್ಯಮಿ ವಿನೋದ್ ಅವರ ಮನೆಯಲ್ಲಿ ಈ ಘಟನೆ ಸಂಭವಿಸಿದೆ. ಬೆಂಕಿ ಹೊತ್ತಿ ಉರಿಯಲಾರಂಭಿಸಿದ ನಂತರ ಅಗ್ನಿಶಾಮಕ ಸಿಬ್ಬಂದಿಗ ಮಾಹಿತಿ ನೀಡಿದ್ದು, ಬಳಿಕ ಅವರು ಬಂದು ಬೆಂಕಿ ನಂದಿಸಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಗೃಹಪಯೋಗಿ ವಸ್ತುಗಳು ಸುಟ್ಟು ಕರಕಲಾಗಿವೆ.

ಬುಧವಾರ ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಚೈತ್ರ ನವರಾತ್ರಿಯ ನಿಮಿತ್ತ ವಿನೋದ್ ಭಾಯ್ ಅವರ ಮನೆಯಲ್ಲಿ ಪೂಜೆ ಏರ್ಪಡಿಸಲಾಗಿತ್ತು. ಈ ಹಿನ್ನೆಲೆ ದೀಪಗಳನ್ನು ಬೆಳಗಿಸಲಾಯಿತು. ನಂತರ ಎಲ್ಲರೂ ತಮ್ಮ ತಮ್ಮ ಕೆಲಸಗಳಲ್ಲಿ ನಿರತರಾಗಿದ್ದರು.

ಅಷ್ಟರಲ್ಲಿ ಕೋಣೆಯಿಂದ ಹೊಗೆ ಬರುತ್ತಿರುವುದನ್ನು ಕಂಡು ಯಾರೋ ಬೊಬ್ಬೆ ಹೊಡೆಯಲು ಶುರು ಮಾಡಿದರು. ನಂತರ ಎಲ್ಲರೂ ಮನೆಯಿಂದ ಹೊರಬಂದರೂ ಗೃಹೋಪಯೋಗಿ ವಸ್ತುಗಳನ್ನು ಉಳಿಸುವಲ್ಲಿ ವಿಫಲರಾದರು. ಅಕ್ಕಪಕ್ಕದವರು ನೀರಿನ ಮೋಟರ್ ಹಾಕಿ ಬೆಂಕಿ ನಂದಿಸಲು ಯತ್ನಿಸಿದರಾದರೂ ವಿಫಲವಾಗಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments