ಮೊನ್ನೆ ತಾನೇ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರ ಪುತ್ರಿ ಫೇಸ್‌ಬುಕ್‌ನಲ್ಲಿ ತಮಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ಫೋಸ್ಟ್ ಪ್ರಕಟಿಸಿದ್ದರು. ಮತ್ತೀಗ ಕೇಂದ್ರ ಸಚಿವ ವಿ.ಕೆ.ಸಿಂಗ್ ಅವರ ಪತ್ನಿ ತಮಗೆ ಬೆದರಿಕೆ ಒಡ್ಡಲಾಗಿದೆ ಎಂದು ದೂರಿದ್ದಾರೆ.
ತಮ್ಮ ಸಂಬಂಧಿಕರ ಸ್ನೇಹಿತ ಪ್ರದೀಪ್ ಚೌಹಾನ್ ಎಂಬಾತ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದು, 2 ಕೋಟಿ ರೂಪಾಯಿಗೆ ಬೇಡಿಕೆ ಇಡುತ್ತಿದ್ದಾನೆ ಎಂದು ಗಾಜಿಯಾಬಾದ್ ಸಂಸದರ ಪತ್ನಿ ಭಾರ್ತಿ ಸಿಂಗ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ನಿಮ್ಮ ಕುಟುಂಬಕ್ಕೆ ಅಪಮಾನವಾಗುವಂತಹ ಆಡಿಯೋ ಮತ್ತು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸುತ್ತೇನೆ ಎಂದಾತ ಬೆದರಿಕೆ ಒಡ್ಡುತ್ತಿದ್ದಾನೆ ಎಂದು ಅವರು ತಿಳಿಸಿದ್ದಾರೆ.
ನವದೆಹಲಿಯ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಬ್ಲ್ಯಾಕ್‌ಮೇಲ್‌ರನನ್ನು ಬಂಧಿಸಲು ವಿಶೇಷ ತಂಡವನ್ನು ರಚಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ