ಜನತಾ ದಳ ನೇತೃತ್ವದ ಸರ್ಕಾರವಿರುವ ಬಿಹಾರದಲ್ಲಿ ಶಿಕ್ಷಣದ ಗುಣಮಟ್ಟ ಎಷ್ಟು ಕಳಪೆಯಾಗಿದೆ ಎಂಬುದು ಪದೇ ಪದೇ ಸಾಬೀತಾಗುತ್ತಲೇ ಇದೆ. ವಿದ್ಯಾರ್ಥಿಗಳ ಗುಂಪೊಂದು ನೆಲದ ಮೇಲೆ ಕುಳಿತು ಮೊಬೈಲ್ ಬೆಳಕಲ್ಲಿ ಪರೀಕ್ಷೆ ಬರೆಯುತ್ತಿರುವ ಚಿತ್ರಗಳೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಹರಿದಾಡುತ್ತಿದ್ದು ರಾಜ್ಯದ ಶಿಕ್ಷಣ ವ್ಯವಸ್ಥೆ ಎಷ್ಟೊಂದು ಶೋಚನೀಯವಾಗಿದೆ ಎಂಬುದಕ್ಕೆ ದೃಷ್ಟಾಂತವೆಂಬಂತಿದೆ.
ರೋಹ್ಟಾಸ್ ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳು ಎಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಪರೀಕ್ಷೆಯನ್ನು ನೀಡುತ್ತಿದ್ದಾರೆ ಎಂಬುದು ಈ ಚಿತ್ರಗಳಲ್ಲಿ ಸ್ಪಷ್ಟವಾಗಿದೆ.
ಜಿಲ್ಲೆಯ ವೀರ್ ಕುಂವರ್ ಸಿಂಗ್ ವಿಶ್ವವಿದ್ಯಾಲಯದಲ್ಲಿ ಈ ದೃಶ್ಯ ಕಂಡು ಬಂದಿದ್ದು ವಿದ್ಯುತ್, ಡೆಸ್ಕ್ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ನೆಲದ ಮೇಲೆ ಕುಳಿತು ತಮ್ಮ ಮೊಬೈಲ್ ಬೆಳಕಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.
ದ್ವಿತೀಯ ಪಿಯುಸಿ ಅಕ್ರಮ ಬಯಲಾದ ಹಿನ್ನೆಲೆಯಲ್ಲಿ ಬಿಹಾರ್ ರಾಜ್ಯ ಶಿಕ್ಷಣ ಇಲಾಖೆ ಸ್ಕ್ಯಾನರ್ ಅಡಿಯಲ್ಲಿ ಬಂದಾಗ ಇದು ಈ ದುರಾವಸ್ಥೆ ಬೆಳಕಿಗೆ ಬಂದಿದೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.