Select Your Language

Notifications

webdunia
webdunia
webdunia
webdunia

ಶಾಲೆಯಲ್ಲಿ ಸಾಮೂಹಿಕ ಅತ್ಯಾಚಾರ

ಶಾಲೆಯಲ್ಲಿ ಸಾಮೂಹಿಕ ಅತ್ಯಾಚಾರ
ನವದೆಹಲಿ , ಬುಧವಾರ, 29 ಜೂನ್ 2016 (09:55 IST)
ಬಾಲಕಿಯೊಬ್ಬಳ ಮೇಲೆ ಶಾಲಾ ಆವರಣದಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ ಹೇಯ ಘಟನೆ ಪೂರ್ವ ದೆಹಲಿಯ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ. 
ಜಗತ್ಪುರಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 17 ವರ್ಷದ ಪೀಡಿತಳ ಸ್ನೇಹಿತ ಮತ್ತು ಸೆಕ್ಯೂರಿಟಿ ಗಾರ್ಡ್ ಇಬ್ಬರು ಸೇರಿ ಈ ಕೃತ್ಯವನ್ನು ನಡೆಸಿದ್ದಾರೆ. ಬಾಲಕಿ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳಿಬ್ಬರಬ್ಬರನ್ನು ಅವರವರ ಮನೆಯಿಂದಲೇ ಬಂಧಿಸಲಾಗಿದೆ.
 
ಆರೋಪಿಗಳಿಬ್ಬರ ಮೇಲೆ ಪೋಸ್ಕೋ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದ್ದು ಬಾಲಕಿಯನ್ನು ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಲಾಗಿದೆ. 
 
ಕೆಲಸ ಕೊಡಿಸುವುದಾಗಿ ನಂಬಿಸಿ ಬಾಲಕಿಯನ್ನು ಶಾಲೆಗೆ ಕರೆದುಕೊಂಡು ಹೋದ ಸ್ನೇಹಿತ ಈ ಕೀಚಕ ಕೃತ್ಯವನ್ನು ಎಸಗಿದ್ದಾನೆ. ಬಳಿಕ ಆರೋಪಿಗಳಿಬ್ಬರು ಪರಾರಿಯಾಗಿದ್ದಾರೆ. 
 
ಶಾಲಾ ಕಚೇರಿಯಲ್ಲಿ ತನ್ನ ಮೇಲೆ ಅತ್ಯಾಚಾರ ನಡೆಸಲಾಯಿತು ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
 

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನಿಂದ ರಿಂಗಿಂಗ್ ಬೆಲ್ ಫ್ರೀಡಂ 251 ಸ್ಮಾರ್ಟ್‌ಫೋನ್ ಮಾರಾಟಕ್ಕೆ