Select Your Language

Notifications

webdunia
webdunia
webdunia
webdunia

ಮಣಿಪುರದಲ್ಲಿ ಮತ್ತೆ ಗುಂಡಿನ ದಾಳಿ : 20ಕ್ಕೂ ಹೆಚ್ಚು ಮಂದಿಗೆ ಗಾಯ!

ಮಣಿಪುರದಲ್ಲಿ ಮತ್ತೆ ಗುಂಡಿನ ದಾಳಿ : 20ಕ್ಕೂ ಹೆಚ್ಚು ಮಂದಿಗೆ ಗಾಯ!
ಗುವಾಹಟಿ , ಶನಿವಾರ, 9 ಸೆಪ್ಟಂಬರ್ 2023 (12:31 IST)
ಗುವಾಹಟಿ : ಮಣಿಪುರದಲ್ಲಿ ಶುಕ್ರವಾರ ಶಸ್ತ್ರಸಜ್ಜಿತ ಸ್ಥಳೀಯರು ಮತ್ತು ಭದ್ರತಾ ಪಡೆಗಳ ಮಧ್ಯೆ ಭಾರೀ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ತೆಂಗ್ನೌಪಾಲ್ ಜಿಲ್ಲೆಯ ಪಲ್ಲೆಲ್ ಪಟ್ಟಣದಲ್ಲಿ ಶುಕ್ರವಾರ ಮುಂಜಾನೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಗಾಯಗೊಂಡವರನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ. ಬೆಳಗ್ಗೆ 6 ಗಂಟೆಗೆ ಗುಂಡಿನ ದಾಳಿ ಪ್ರಾರಂಭವಾಗಿದ್ದು, ದಾಳಿಯಲ್ಲಿ ಭದ್ರತಾ ಸಿಬ್ಬಂದಿಯೂ ಗಾಯಗೊಂಡಿದ್ದಾರೆ ಎಂದು ಸರ್ಕಾರಿ ಮೂಲಗಳು ಹೇಳಿವೆ.

ಈ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಾಗಿದ್ದು, ಆರ್ಎಎಫ್, ಅಸ್ಸಾಂ ರೈಫಲ್ಸ್ ಮತ್ತು ಪೊಲೀಸರನ್ನು ಒಳಗೊಂಡ ಭದ್ರತಾ ಪಡೆಗಳು ಪರಿಸ್ಥಿತಿಯನ್ನು ಹತೋಟಿಗೆ ತರಲು ಅಶ್ರುವಾಯು ಶೆಲ್ಗಳನ್ನು ಹಾರಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬೆದರಿಕೆ : ಅಧಿಕಾರಿಗಳಂತೆ ಕಾಲ್ ಮಾಡಿ ಲಕ್ಷಗಟ್ಟಲೆ ದೋಖಾ ಎಚ್ಚರಿಕೆ!