Publish Date: Wed, 13 Apr 2022 (08:02 IST)
Updated Date: Wed, 13 Apr 2022 (08:19 IST)
ನ್ಯೂಯಾರ್ಕ್ : ನ್ಯೂಯಾರ್ಕ್ನ ಬ್ರೂಕ್ಲಿನ್ನಲ್ಲಿರುವ ಸುರಂಗಮಾರ್ಗದ ರೈಲು ನಿಲ್ದಾಣದಲ್ಲಿ ಮಂಗಳವಾರ ಹಲವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ.
ದಾಳಿಯಲ್ಲಿ 13ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ. ಗುಂಡಿನ ದಾಳಿ ನಡೆಸಿರುವವರನ್ನು ಇನ್ನೂ ಕಂಡುಹಿಡಿಯಲಾಗಿಲ್ಲ.
ಆದರೂ ಶೂಟರ್ ನಿಲ್ದಾಣದಲ್ಲಿಯೇ ಇದ್ದು, ಮತ್ತೆ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಸ್ಥಳೀಯ ಮಾಧ್ಯಮಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ದಾಳಿ ನಡೆದ ಸ್ಥಳದಲ್ಲಿ ಬೆಳಗ್ಗೆ ಜನ ದಟ್ಟನೆಯಿದ್ದ ಸಮಯದಲ್ಲಿ ಸ್ಫೋಟಕಗಳು ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ರೈಲು ಸಂಚಾರಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ.