ಲಕ್ನೋ : ತಾನು ಪ್ರೀತಿಸುತ್ತಿರುವ ಹುಡುಗಿ ಬೇರೊಬ್ಬನ ಜೊತೆ ಮೊಬೈಲ್ ನಲ್ಲಿ ಮಾತನಾಡಿದ್ದಾಳೆಂದು ಸಿಟ್ಟಿಗೆದ್ದು ಹುಡುಗನೊಬ್ಬ ಆಕೆಗೆ ಶೂಟೌಟ್ ಮಾಡಿ ನಂತರ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಈ ಘಟನೆ ಉತ್ತರಪ್ರದೇಶದಲ್ಲಿ ಮಾನ್ವಿ ಭಾನ್ಪುರ್ ಪ್ರದೇಶದಲ್ಲಿ ನಡೆದಿದೆ. ಸದ್ಯ ಘಟನೆಯಿಂದ ಹುಡುಗಿಯ ಸ್ಥಿತಿ ಚಿಂತಾಜನಕವಾಗಿದ್ದು, ಮೀರತ್ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಆರೋಪಿಯನ್ನು ಪವನ್ ಕುಮಾರ್ (18) ಎಂದು ಗುರುತಿಸಲಾಗಿದೆ. ಈತ ತಾನು ಪ್ರೀತಿಸಿದ ಹುಡುಗಿ ಬೇರೊಬ್ಬನ ಜೊತೆ ಮೊಬೈಲ್ನಲ್ಲಿ ಮಾತನಾಡಿದ್ದಾಳೆ ಎಂದು ರೊಚಿಗೆದ್ದು, ಆಕೆ ಶಾಲೆ ಮುಗಿಸಿ ಆಟೋದಲ್ಲಿ ಮನೆಗೆ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ಈ ಕೃತ್ಯ ಎಸಗಿದ್ದಾನೆ. ನಂತರ ತಾನೂ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!