Webdunia - Bharat's app for daily news and videos

Install App

ಹೆಲ್ಮೆಟ್, ಮುಖವಾಡ ಧರಿಸಿ ಮಣಪ್ಪುರಂ ಶಾಖೆಯಿಂದ ಹಾಡಹಗಲೇ 30 ಕೆ.ಜಿ ಚಿನ್ನ ದೋಚಿದ ಕಿರಾತಕರು

Sampriya
ಶನಿವಾರ, 4 ಜನವರಿ 2025 (14:35 IST)
Photo Courtesy X
ಸಂಬಲ್‌ಪುರ: ಮಣಪ್ಪುರಂ ಫೈನಾನ್ಸ್ ಶಾಖೆಯೊಂದರಲ್ಲಿ ದರೋಡೆಕೋರರು ಒರೋಬ್ಬರಿ 30 ಕೆ.ಜಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾದ ಘಟನೆ ಒಡಿಶಾದ ಸಂಬಲ್‌ಪುರ ನಗರದಲ್ಲಿ ನಡೆದಿದೆ.

ಹತ್ತು ಮಂದಿ ದರೋಡೆಕೋರರು ಹೆಲ್ಮೆಟ್ ಮತ್ತು ಮುಖವಾಡಗಳನ್ನು ಧರಿಸಿ ಏಕಾಏಕಿ ಶಾಖೆಗೆ ನುಗ್ಗಿ ಸಿಬ್ಬಂದಿಗೆ ಬಂದೂಕು ತೋರಿಸಿ ಬೆದರಿಕೆ ಹಾಕಿದ್ದಾರೆ. ಇದೇ ವೇಳೆ ಶಾಖೆಯ ವ್ಯವಸ್ಥಾಪಕರು ಸೇರಿದಂತೆ ಹಲವರನ್ನು ಕಟ್ಟಿ ಹಾಕಿ 30 ಕೆ.ಜಿ ಚಿನ್ನಾಭರಣ ಮತ್ತು ₹4 ಲಕ್ಷ ಹಣವನ್ನು ದೋಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಶಾಖೆಯ ಅಧಿಕಾರಿಗಳು ನೀಡಿದ ದೂರನ್ನು ಆಧರಿಸಿ ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ನಡೆದ ಸ್ಥಳ ಮತ್ತು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸುತ್ತಿದ್ದು, ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ. ಕಂಪನಿಯ ಉದ್ಯೋಗಿಗಳನ್ನೂ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಾವುದೇ ಸಿಬ್ಬಂದಿ ಅಥವಾ ಗ್ರಾಹಕರು ಗಾಯಗೊಂಡಿಲ್ಲ. ಕಂಪನಿಯ ಗ್ರಾಹಕರು ಆತಂಕ ಪಡುವ ಅಗತ್ಯತೆ ಇಲ್ಲ. ಕಂಪನಿಯು ನಿಮ್ಮ ಸ್ವತ್ತುಗಳಿಗೆ ಜವಾಬ್ದಾರಿಯಾಗಿದ್ದು, ನಷ್ಟವನ್ನು ತುಂಬಿಕೊಡಲಿದೆ ಎಂದು ಮಣಪ್ಪುರಂ ಫೈನಾನ್ಸ್ ಹೇಳಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments