ಪೆನ್‌ಡ್ರೈವ್ ಹಂಚಿದವರ ಜತೆ ವೇದಿಕೆ ಹಂಚಿಕೊಳ್ಳಬೇಕಾ: ಕುಮಾರಸ್ವಾಮಿ ಕಿಡಿ

Sampriya
ಬುಧವಾರ, 31 ಜುಲೈ 2024 (12:42 IST)
Photo Courtesy X
ನವದೆಹಲಿ: ಮುಡಾ ಹಗರಣ ಸಂಬಂಧ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಗೆ ಜೆಡಿಎಸ್‌ ಬೆಂಬಲ ನೀಡದಿರುವುದಕ್ಕೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿ, ನಮ್ಮ ಕುಟುಂಬಕ್ಕೆ ವಿಷ ಹಾಕಿದವರ ಜತೆ ಹೇಗೆ ಭಾಗಿಯಾಗಲಿ ಎಂದು ಪ್ರಶ್ನಿಸಿದ್ದಾರೆ.

ಈ ಸಂಬಂಧ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ ಅವರು ಕಿಡಿಕಾರಿದರು. ಹಾಸನದಲ್ಲಿ ಬೀದಿ ಬೀದಿಗಳಲ್ಲಿ ಪೆನ್‌ಡ್ರೈವ್ ಸಿಗಲು ಕಾರಣರಾಗಿರುವವರ ಜತೆ ನಾನು ವೇದಿಕೆ ಹಂಚಿಕೊಳ್ಳಲೇ ಎಂದು ಪ್ರಶ್ನಿಸಿದರು.

ನಮ್ಮ ಕುಟುಂಬಕ್ಕೆ ವಿಷ ಹಾಕಿದವರ ಜತೆ ನಾನು ಹೇಗೆ ಭಾಗಿಯಾಗಲಿ ಎಂದು ಪ್ರೀತಂ ವಿರುದ್ಧ ಮೊದಲ ಬಾರಿ ಆಕ್ರೋಶ ಹೊರಹಾಕಿದ್ದಾರೆ.

ಮುಡಾ ಹಗರಣವನ್ನು ವಿರೋಧಿಸಿ  ಪಾದಯಾತ್ರೆ ಬಗ್ಗೆ ಬಿಜೆಪಿ ಏಕಪಕ್ಷೀಯವಾಗಿ ತೀರ್ಮಾನ ತೆಗೆದುಕೊಂಡಿದ್ದು, ಇದಕ್ಕೆ ಜೆಡಿಎಸ್‌ನಿಂದ ನೈತಿಕ ಬೆಂಬಲವು ಇರುವುದಿಲ್ಲ. ನಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಕಾರಣ ಬೆಂಬಲ ನೀಡುತ್ತಿಲ್ಲ. ಈ ವಿಚಾರದಿಂದ ನನ್ನ ಮನಸ್ಸಿಗೂ ನೋವಾಗಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಿಪರೀತ ಚಳಿ ನಡುವೆ ಈ ವಾರದ ಹವಾಮಾನ ವರದಿ ಗಮನಿಸಿ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮುಂದಿನ ಸುದ್ದಿ