Publish Date: Thu, 16 Sep 2021 (11:57 IST)
Updated Date: Thu, 16 Sep 2021 (12:02 IST)
ಮುಜಾಫರನಗರ : ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಬುಧವಾರ 17 ವರ್ಷದ ಬಾಲಕಿಯೊಬ್ಬಳ ಮೇಲೆ ಇಬ್ಬರು ಬಂದೂಕು ತೋರಿಸಿ ಅತ್ಯಾಚಾರ ಎಸಗಿರುವ ದೂರು ದಾಖಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಆರೋಪಿಯೊಬ್ಬನನ್ನು ಬಂಧಿಸಲಾಗಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ.
ಬಂದೂಕು ತೋರಿಸಿ ಅತ್ಯಾಚಾರ ನಡೆಸಿದ ಆರೋಪಿಗಳು ಬಾಲಕಿಯನ್ನು ಕೊಲ್ಲುವ ಬೆದರಿಕೆ ಒಡ್ಡಿದ್ದಾರೆ ಎಂದು ಬಾಲಕಿಯ ತಂದೆ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.