Webdunia - Bharat's app for daily news and videos

Install App

ನ್ಯಾಯಾಧೀಶರಿಗೆ ಗನ್ ತೋರಿಸಿ ಹಲ್ಲೆ ನಡೆಸಿದ ಪೊಲೀಸರು!

Webdunia
ಶನಿವಾರ, 20 ನವೆಂಬರ್ 2021 (08:22 IST)
ಪಟ್ನಾ : ನ್ಯಾಯಾಲಯದ ಕೊಠಡಿಯೊಳಗೆ ನ್ಯಾಯಾಧೀಶರ ಮೇಲೆ ಇಬ್ಬರು ಪೊಲೀಸರು ಹಲ್ಲೆ ನಡೆಸಿದ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.
ಜಿಲ್ಲೆಯ ಜಂಜಾರ್ಪುರ ನ್ಯಾಯಾಲಯದಲ್ಲಿ ಈ ದಾಳಿ ನಡೆದಿದ್ದು, ಪ್ರಕರಣವನ್ನು ಪಟ್ನಾ ಹೈಕೋರ್ಟ್ ಸ್ವಯಂಪ್ರೇರಿತ ವಿಚಾರಣೆಗೆ ತೆಗೆದುಕೊಂಡಿದೆ. ಬಿಹಾರ ಪೊಲೀಸ್ ಮಹಾನಿರ್ದೇಶಕರಿಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.
ಇಬ್ಬರು ಪೊಲೀಸರನ್ನು ಒಳಗೊಂಡ ಪ್ರಕರಣವೊಂದನ್ನು ನ್ಯಾಯಾಧೀಶರು ವಿಚಾರಣೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಕೊಠಡಿಗೆ ನುಗ್ಗಿದ ಆರೋಪಿಗಳು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅವಿನಾಶ್ ಕುಮಾರ್ ಅವರತ್ತ ಪಿಸ್ತೂಲಿನಿಂದ ಗುರಿ ಇರಿಸಿ ಹಲ್ಲೆ ಮಾಡಿದ್ದಾರೆ. ನ್ಯಾಯಾಧೀಶರು ಸುರಕ್ಷಿತವಾಗಿದ್ದಾರೆ. ಆದರೆ ಈ ದಿಢೀರ್ ಘಟನೆಯಿಂದ ಆಘಾತಗೊಂಡಿದ್ದಾರೆ.
ಇಬ್ಬರೂ ಪೊಲೀಸ್ ಅಧಿಕಾರಿಗಳನ್ನು ಬಂಧಿಸಲಾಗಿದೆ. ಪೊಲೀಸರು ಇಬ್ಬರು ಮಹಿಳೆಯರಿಗೆ ಕಿರುಕುಳ ನೀಡಿದ ಆರೋಪ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶ ಅವಿನಾಶ್ ಕುಮಾರ್ ವಿಚಾರಣೆ ನಡೆಸುತ್ತಿದ್ದರು. ಲೋಕ ಅದಾಲತ್ನಲ್ಲಿ ಈ ವಿಚಾರಣೆ ನಡೆಯುತ್ತಿತ್ತು. ಅದರಲ್ಲಿ ಆರೋಪಿಗಳಾದ ಗೋಪಾಲ್ ಕೃಷ್ಣ ಮತ್ತು ಅಭಿಮನ್ಯು ಕುಮಾರ್ ಹಾಜರಿದ್ದರು.
ವಿಚಾರಣೆ ವೇಳೆ ಕೋಪಗೊಂಡ ಪೊಲೀಸ್ ಅಧಿಕಾರಿಗಳು ಅವರತ್ತ ನುಗ್ಗಿ ಹಲ್ಲೆ ನಡೆಸಿ ಅವಾಚ್ಯ ಪದಗಳಿಂದ ನಿಂದಿಸಿದ್ದರು. ಈ ವೇಳೆ ಸ್ಥಳೀಯ ವಕೀಲರೊಂದಿಗೂ ಕೈಕೈ ಮಿಲಾಯಿಸಿದ್ದಾರೆ. ನ್ಯಾಯಾಲಯಕ್ಕೆ ಧಾವಿಸಿದ ಡಿಸಿಪಿ ಶ್ರೇಣಿಯ ಅಧಿಕಾರಿಯೊಬ್ಬರು ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಒಬ್ಬ ಅಧಿಕಾರಿ ಪಿಸ್ತೂಲನ್ನು ತನ್ನತ್ತ ಗುರಿ ಇರಿಸಿ ಕೊಲ್ಲುವ ಬೆದರಿಕೆ ಹಾಕಿದ್ದರು ಎಂದು ನ್ಯಾಯಾಧೀಶರು ದೂರಿನಲ್ಲಿ ತಿಳಿಸಿದ್ದಾರೆ. ಈ ಘಟನೆ ಬಗ್ಗೆ ಅವರು ಪಟ್ನಾ ಹೈಕೋರ್ಟ್ಗೆ ಪತ್ರ ಬರೆದಿದ್ದಾರೆ. ಸಂಜೆ ವೇಳೆ ಹೈಕೋರ್ಟ್ನಲ್ಲಿ ವಿಶೇಷ ವಿಚಾರಣೆ ನಡೆದಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments