Select Your Language

Notifications

webdunia
webdunia
webdunia
webdunia

ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆದ ಸಿದ್ದಗಂಗಾ ಶ್ರೀಗಳು

ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆದ ಸಿದ್ದಗಂಗಾ ಶ್ರೀಗಳು
ಚೆನ್ನೈ , ಬುಧವಾರ, 19 ಡಿಸೆಂಬರ್ 2018 (11:29 IST)
ಚೆನ್ನೈ : ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನಲೆಯಲ್ಲಿ ಇಂದು ಚೆನ್ನೈನ ರೇಲಾ ಆಸ್ಪತ್ರೆಯಿಂದ ಶ್ರೀಗಳನ್ನು ಡಿಸ್ಚಾರ್ಜ್ ಮಾಡಲಾಗುತ್ತಿದೆ.


ಪಿತ್ತಕೋಠದ ಸೋಂಕು ಉಂಟಾಗಿದ್ದರಿಂದ ಸಿದ್ದಗಂಗಾ ಶ್ರೀಗಳನ್ನು ಚೆನ್ನೈನ ರೇಲಾ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಕಳೆದ 13 ದಿನಗಳಿಂದ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಇಂದು 12 ಗಂಟೆಗೆ ಡಿಸ್ಚಾರ್ಜ್ ಮಾಡಲಾಗುತ್ತಿದೆ.


ಇಂದು ಸುತ್ತೂರು ಶ್ರೀಗಳು ಆಸ್ಪತ್ರೆಗೆ ಆಗಮಿಸಿದ್ದು, ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆದೊಯ್ಯಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪೊಲೀಸರ ಭರ್ಜರಿ ಬೇಟೆ: ಕುಖ್ಯಾತ ಅಂತಾರಾಜ್ಯ ಕಳ್ಳರು ಅಂದರ್​