Daily Horoscope

Select Your Language

Notifications

webdunia
webdunia
webdunia
webdunia

ಇಂದು ರಾಹುಲ್ ಗಾಂಧಿ ಭೇಟಿ ವೇಳೆ ಮಗನಿಗಾಗಿ ಡಿಮ್ಯಾಂಡ್ ಇಟ್ರಾ ಸಿದ್ದರಾಮಯ್ಯ

Siddaramaiah
ನವದೆಹಲಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದರು.

ಈ ಸಂದರ್ಭದಲ್ಲಿ ತಮ್ಮ ಜತೆ  ಮಗ ಯತೀಂದ್ರನನ್ನು  ಜೊತೆಗೇ ಕರೆದೊಯ್ದಿದ್ದ ಸಿದ್ದರಾಮಯ್ಯ ಅವರು, ರಾಹುಲ್ ಗಾಂಧಿಗೆ ಪರಿಚಯ ಮಾಡಿಕೊಟ್ಟು ಹೊಸ ಸಂಪುಟದಲ್ಲಿ ಅವಕಾಶ ಕಲ್ಪಿಸಲು ಪ್ರಯತ್ನ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಭೇಟಿ ವೇಳೆ, ನಿರ್ಗಮಿತ ಇಂಧನ ಸಚಿವ ಕೆ.ಜೆ. ಜಾರ್ಜ್ ಸಹ ಹಾಜರಿದ್ದರು. ತಮ್ಮ ಆಪ್ತರಿಗೂ ಸಂಪುಟದಲ್ಲಿ ಅವಕಾಶ ನೀಡುವಂತೆ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಮಂಗಳವಾರ, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯ ಅವರಿಗೆ ಸೂಚಿಸಿದ್ದ ರಾಹುಲ್ ಗಾಂಧಿ, ಹೊಸ ಸರ್ಕಾರದಲ್ಲಿ ಮಗನಿಗೆ ಅವಕಾಶ ಕಲ್ಪಿಸುವುದಾಗಿ ಭರವಸೆ ನೀಡಿದ್ದರು ಎಂದು ತಿಳಿದು ಬಂದಿದೆ.

ನಿರ್ಗಮಿತ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಜೊತೆ ಸಿದ್ದರಾಮಯ್ಯ ಗುರುವಾರವೇ ವಿಶೇಷ ವಿಮಾನದಲ್ಲಿ ನವದೆಹಲಿಗೆ ತೆರಳಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಡಿಕೆ ಶಿವಕುಮಾರ್ ಗೆ ಅದೃಷ್ಟ ತಂದಿರೋದು ಬೇರೆ ಯಾರೂ ಅಲ್ಲ ಅವಳೇ..