ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಚರ್ಚೆ ನಡುವೆಯೇ ಸಿಎಂ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಶನಿವಾರ ಭೇಟಿಯಾಗಿರುವುದು ಭಾರೀ ಕುತೂಹಲವನ್ನು ಮೂಡಿಸಿದೆ. ಅದಲ್ಲದೆ ಇಂದು ಸಿಎಂ ಹಾಗೂ ಡಿಸಿಎಂ ಪ್ರತ್ಯೇಕ ಭೇಟಿಯು ಕುತೂಹಲ ಮೂಡಿಸಿದೆ.
ಜನಪಥ್ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ರಾಹುಲ್ ಗಾಂಧಿಯನ್ನು ಸಿದ್ದರಾಮಯ್ಯ ಭೇಟಿಯಾಗಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿಯಿದೆ,
ಇನ್ನು ಈ ಭೇಟಿ ಹಿಂದೆ ಬಿಹಾರದ ಫಲಿತಾಂಶ ಹಾಗೂ ಕರ್ನಾಟಕದ ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ನಾಯಕರು ಚರ್ಚಿಸಿದ್ದಾರೆ. ಈ ಸಂದರ್ಭದಲ್ಲಿ ಸಂಪುಟ ಪುನಾರಚನೆ ಪ್ರಸ್ತಾಪವನ್ನು ಸಿಎಂ ಇಟ್ಟಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ಅವರಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎನ್ನಲಾಗಿದೆ. ಡಿಸೆಂಬರ್‌ಗೂ ಮುನ್ನ ಸಂಪುಟ ಪುನಾರಚನೆಗೆ ಸಿಎಂ ಕ್ಲೈಮ್ ಮಾಡಿದ್ದಾರೆಂದು ತಿಳಿದುಬಂದಿದೆ.
ಬಿಹಾರದ ಚುನಾವಣೆ ಸೋಲಿನ ಬಗ್ಗೆ ರಾಹುಲ್ ಗಾಂಧಿ ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಹಾಗೂ ತೆಲಂಗಾಣದ ಸಿಎಂ ಜತೆ ಚರ್ಚಿಸಿದ್ದಾರೆ.